ಮಂಗಳೂರು: ಕೋವಿಡ್ 19 ಕೊರೊನಾ ವೈರಸ್ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿದೆ. ನಗರದಲ್ಲಿ ಇಬ್ಬರು ಪತ್ರಕರ್ತ ಮಿತ್ರರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಅವರ ಚಿಕಿತ್ಸೆಗೆ ಸಂಬಂಧಪಟ್ಟಂತೆ ಈಗಾಗಲೇ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು, ಉಸ್ತುವಾರಿ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಮಾತನಾಡಿ ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತರ ಬಗ್ಗೆ ಗಮನ ಹರಿಸಲು ದ.ಕ. ಜಿ.ಕಾರ್ಯನಿರತ ಪತ್ರಕರ್ತರ ಸಂಘದ ಅಧ‍್ಯಕ್ಷ ಶ್ರೀನಿವಾಸ ನಾಯಕ್ ಅವರು ಒತ್ತಾಯಿಸಿದ್ದಾರೆ.
ಇನ್ನು ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ಪರಿಸ್ಥಿತಿ ಎದುರಾಗುವ ಸಾಧ್ಯತೆಯಿದ್ದು ನಾವೆಲ್ಲರೂ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದರು. ಇನ್ನು ಮುಂದೆ ಯಾವುದೇ ಸಂಘಟನೆ ಅಥಾವಾ ರಾಜಕೀಯದವರು ಪತ್ರಿಕಾಗೋಷ್ಠಿ ಆಯೋಜಿಸುವವರು ಸದ್ಯದ ಮಟ್ಟಿಗೆ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಿಕೊಡಲಿ ಅಥವಾ ಆಧುನಿಕ ತಂತ್ರಜ್ಞಾನ ಬಳಸಿ ಪತ್ರಿಕಾಗೋಷ್ಠಿ ನಡೆಸಲಿ ಎಂಬುವುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ. ಕೋವಿಡ್ ಬಗ್ಗೆ ಯಾರೂ ಆತಂಕ ಪಡುವುದು ಬೇಡ, ಆದರೆ ಮುಂಜಾಗ್ರತೆ, ಸುರಕ್ಷತೆ ಅಗತ್ಯ.ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
-ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ
ಮಂಗಳೂರು
