ಕುಪ್ಪೆಪದವು: ಗುರುಪುರ ಬ್ಲಾಕ್ ಕಾಂಗ್ರೆಸ್ ಇದರ ಮುತ್ತೂರು ವಲಯ ಕಾಂಗ್ರೆಸ್ ಸಮಿತಿಯ ತುರ್ತು ಸಭೆಯನ್ನು ಭಾನುವಾರ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ ಯವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗುರುಪುರ ಗುಡ್ಡ ಕುಸಿತದಲ್ಲಿ ಸಾವನಪ್ಪಿದ ವಿದ್ಯಾರ್ಥಿಗಳಿಗೆ ಮೌನ ಪ್ರಾರ್ಥನೆಯನ್ನು ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು, ಹಾಗೂಈ ಸಭೆಯಲ್ಲಿ ಮುತ್ತೂರು ಮೂಲರಪಟ್ನ ಸೇತುವೆ ಹಾಗೂ ತಾರೆಮಾರ್ ಆರ್ಬಿ ಸೇತುವೆ ಯ ಕಾಮಗಾರಿಯ ಬಗ್ಗೆ ಚರ್ಚಿಸಲಾಯಿತು.
ಹಾಗೂ ಕಾಂಗ್ರೆಸ್ ಪಕ್ಷಕ್ಕೆ ನೆಚ್ಚಿನ ಜನ ನಾಯಕ ವಿಠಲ್ ಪೂಜಾರಿ ಕೊಳವೂರು ಇವರನ್ನು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಸುರೇಂದ್ರ ಕಾಂಬ್ಳಿ ಇವರು ಪಕ್ಷದ ಶಾಲು ಹೊದಿಸುವುದರ ಮೂಲಕ ಅವರನ್ನು ಪಕ್ಷಕ್ಕೆ ಸೇರ್ಪಡಿಸಲಾಯಿತು, ಹಾಗೂ ಮುತ್ತೂರು ವಲಯ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿಯು ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್ ಸದಸ್ಯರಾದ ಸುನಿಲ್ ಗಂಜಿಮಠ, ವಲಯ ಕಾಂಗ್ರೆಸ್ ನ ಅಧ್ಯಕ್ಷ ಹರಿಯಪ್ಪ ಮುತ್ತೂರು , ಹಾಗೂ ಬಾಷಾ ಮಾಸ್ಟ್ರು , ಹಾಗೂ ಕುಪ್ಪೆಪದವು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬೂಬಕ್ಕರ್ ಕಲ್ಲಾಡಿ, ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ, ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ರುಕ್ಮಿಣಿ, ಶ್ರೀಮತಿ ಫ್ಲೋರಿನ್ ಫೆರ್ನಾಂಡಿಸ್ ಹಾಗೂ ಮುತ್ತೂರು ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಎಚ್.ಕೆ ಹಾಗೂ ವಲಯ ಕಾಂಗ್ರೆಸ್ ನ ಸದಸ್ಯರು ಹಾಗೂ ಯುವ ಕಾಂಗ್ರೆಸ್ ನ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
