ಬಂಟ್ವಾಳ: ದ್ವಿತೀಯ ಪಿ.ಯು.ಸಿ 2019 – 20 ನೇ, ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಲ್ಕಾರ್ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ. 95 ರಷ್ಟು ಫಲಿತಾಂಶವನ್ನು ದಾಖಲಿಸಿಕೊಂಡಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 140 ವಿಧ್ಯಾರ್ಥಿನಿಯರಲ್ಲಿ 133 ವಿಧ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಅದರಲ್ಲಿ 24 ವಿಧ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 94 ವಿಧ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಹಾಗೂ ಉಳಿದವರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿನ, ಫಾತಿಮತ್ ನಿಶಾ 558, ವಾಣಿಜ್ಯ ವಿಭಾಗದಲ್ಲಿನ, ಝೈತುನ್ನಿಸಾ 551 ಮತ್ತು ವಿಜ್ಞಾನ ವಿಭಾಗದಲ್ಲಿ, ಝೈನಬಾ ಅಫ್ರತ್ 540 ಅಂಕ ಗಳಿಸಿ, ಸಂಸ್ಥೆಗೆ ಪ್ರಥಮ ಸ್ಥಾನಿಗಳಾಗಿದ್ದಾರೆ. ಎಂದು ಸಂಸ್ಥೆಯ ಸಂಸ್ಥಾಪಕ ಎಸ್. ಎಮ್. ರಶೀದ್ ಹಾಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
