ಬಂಟ್ವಾಳ: ಮಳೆಹಾನಿ ಯೋಜನೆಯಡಿ 2 ಕೋ.ರೂ. ವೆಚ್ಚದಲ್ಲಿ ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ಕುಳಾಲು ಪ್ರದೇಶಗಳಿಗೆ ಸಂಪರ್ಕಿಸುವ ಸರ್ವಋತು ರಸ್ತೆಯಾಗಿ ಅಭಿವೃಧ್ಧಿಗೊಂಡ ರಸ್ತೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಗ್ರಾಮೀಣ ರಸ್ತೆಗಳು ಅಭಿವೃದ್ಧಿಗೊಂಡಾಗ ಗ್ರಾಮ ಅಭಿವೃದ್ಧಿಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಸರಕಾರ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಒತ್ತುಕೊಡುತ್ತಿದ್ದು ಈ ರಸ್ತೆ ಸರ್ವರಿಗೂ ಸದು ಪಯೋಗವಾಗಲಿ ಎಂದು ಆಶಿಸಿದರು.

IMG-20200715-WA0032ಈ ಸಂಧರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಐತ್ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನಕಾರ್ಯದರ್ಶಿ ಡೊಂಬಯ್ಯ ಅರಳ, ಮಹಾಶಕ್ತಿಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಮುಖರಾದ  ಲೋಹಿತ್ ಕೊಳ್ನಾಡು, ವಿಶ್ವನಾಥ ಪೂಜಾರಿ, ಬಾಲಕೃಷ್ಣ ಸೆರ್ಕಳ, ಪ್ರಶಾಂತ್ ಶೆಟ್ಟಿ ಅಗರಿ, ಚೆನ್ನಪ್ಪ ಗೌಡ, ಆನಂದ ಪೂಜಾರಿ, ಜಯರಾಮ ನಾಯ್ಕ, ರಾಜಾರಾಮ ಹೆಗ್ಡೆ, ಮಂಕುಡೆ ಕೃಷ್ಣ ಆಚಾರ್, ಹರೀಶ್ ಟೈಲರ್, ವೇಣುಗೋಪಾಲ್ ಮುಂತಾದವರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *