ಮಂಗಳೂರು: ಕೊವಿಡ್-19 ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಕುರಿತು, ಉಪ ಮುಖ್ಯ ಮಂತ್ರಿಗಳಾದ ಡಾ. ಅಶ್ವಥ್ ನಾರಾಯಣರವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ತುರ್ತು ಸಭೆ.b3bd83b5-9739-4465-b9fe-905744814ca9

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣ ಕುರಿತು, ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ವಿಕಾಸಸೌಧದಲ್ಲಿ ಇಂದು ಉಪ ಮುಖ್ಯ ಮಂತ್ರಿಗಳಾದ ಡಾ. ಅಶ್ವತ್ ನಾರಾಯಣರವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ತುರ್ತು ಸಭೆ ನಡೆಸಿದರು.

ಸಭೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಶಾಸಕರುಗಳಾದ ಶ್ರೀ ವೇದವ್ಯಾಸ ಕಾಮತ್, ಶ್ರೀ ಹರೀಶ್ ಪುಂಜ, ಶ್ರೀ ಯು.ಟಿ.ಖಾದರ್ ಹಾಗೂ ಜಿಲ್ಲೆಯ ಆರೋಗ್ಯ ಅಧಿಕಾರಿಗಳ ಜೊತೆ ವಿಡಿಯೋ ಸಂವಾದದಲ್ಲಿ ಮುಖಾಮುಖಿ ಮಾತನಾಡಿದ ಉಪ ಮುಖ್ಯ ಮಂತ್ರಿಗಳಾದ ಡಾ ಅಶ್ವತ್ಥನಾರಾಯಣರವರು, ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಕೋರಿಕೆಯಂತೆ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲು 25,000 ರ Rapid antigen test kit ಗಳನ್ನು ಕೂಡಲೇ ಜಿಲ್ಲೆಗೆ ಸರಬರಾಜು ಮಾಡಲಾಗುವುದು ಹಾಗೂ 15 ಆಂಬುಲೆನ್ಸ್‌ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಕೋವಿಡ್-19 ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.

ಇನ್ನು ಮುಂದೆ ಕೋವಿಡ್ -19 ಚಿಕಿತ್ಸೆಗೆ ಒಳಪಡುವವರು ಮತ್ತು ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಉಪ ಮುಖ್ಯಮಂತ್ರಿಗಳು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯ ಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದರು.

ಈ ಮಹತ್ವದ ಸಭೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್-19 ಪೀಡಿತರ ಸಮಸೈಗಳು ಪರಿಹಾರ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಪ್ರತಿಕ್ರಿಯಿಸಿ, ಜಿಲ್ಲೆಯ ನೆರವಿಗೆ ಬಂದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಾll ಅಶ್ವತ್ ನಾರಾಯಣ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

By suddi9

Leave a Reply

Your email address will not be published. Required fields are marked *