ಕೋಲಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೂತನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನವರಾದ ವಿಜಯಕುಮಾರ್ ರವರನ್ನು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು,

CDPO ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿ ಸಮಿತಿಯ ರಾಜ್ಯ ಸಂಸ್ಥಾಪಕ ಅಧ್ಯಕ್ಷರಾದ ಕಲ್ವಮಂಜಲಿ ಸಿ. ಶಿವಣ್ಣ, ರಾಜ್ಯಾಧ್ಯಕ್ಷರಾದ ಮದ್ದೂರು ಬಿ.ಎನ್. ತಜುಜ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಯಲಹಂಕ ಯೋಜನೆಯ ಅಂಗನವಾಡಿ ಕಾರ್ಯಕರ್ತೆ ಮಂಗಳಗೌರಿರವರು ನೂತನ ಸಿ.ಡಿ.ಪಿ. ರವರನ್ನು ಹೂಗುಚ್ಚ ನೀಡಿ ಸ್ವಾಗತಿಸುತ್ತಾ ಮಾತನಾಡಿ ನೂತನ ಅಧಿಕಾರಿಯಾದ ವಿಜಯ ಕುಮಾರ್ ರವರು ಇಲಾಖೆಯಲ್ಲಿ ಉತ್ತಮ ಸೇವೆಯನ್ನು ಮಾಡುತ್ತಾ ಉತ್ತಮ ಹೆಸರನ್ನು ಗಳಿಸಿ ಆದಷ್ಟು ಶೀಘ್ರದಲ್ಲಿ ಇಲಾಖೆಯಲ್ಲಿ ಹಂತಹಂತವಾಗಿ ಮೇಲಾಧಿಕಾರಿಗಳಾಗಿ ಸೇವೆ ಸಲ್ಲಿಸಲು ಭಗವಂತ ಅವರಿಗೆ ಆರ್ಶೀವಾದ ನೀಡಲೆಂದು ಸಮಿತಿಯ ಮುಖಂಡರುಗಳು ಶುಭ ಕೋರಿದರು.

By Suddi9

Leave a Reply

Your email address will not be published. Required fields are marked *