ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಮುಖಂಡ, ಧಾರ್ಮಿಕ ಸಂಘಟನೆಗಳ ಮುಂದಾಳು ಎಸ್.ಅಬ್ಬಾಸ್ (69) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ನಿಧನರಾಗಿದ್ದಾರೆ.83a0e341-7380-4d38-98a8-9625009598c3

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಅಬ್ಬಾಸ್ ಅವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯವಾಗಿದ್ದ ಅವರು ವಿವಿಧ ಧಾರ್ಮಿಕ ಸಂಘಟನೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಜಿಪನಡು ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್, ದ.ಕ. ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಾಮಾಜಿಕವಾಗಿಯೂ ಗುರುತಿಸಿಕೊಂಡಿದ್ದ ಅಬ್ಬಾಸ್ ಅವರು ಸರ್ವ ಧರ್ಮಗಳ ಜನರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಅವರು  ಪತ್ನಿ ,ಇಬ್ಬರು ಪುತ್ರರು, ಮೂವರು ಪುತ್ರಿಯರ ಸಹಿತ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

ಸಂತಾಪ: ಎಸ್.ಅಬ್ಬಾಸ್ ಅವರ ನಿಧನಕ್ಕೆ‌ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಸಜೀಪನಡು ಗ್ರಾಮ‌ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್, ಬಂಟ್ವಾಳ ತಾಲೂಕು ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀಶ್ ಅಲಿ, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಜಿ.ಮುಹಮ್ಮದ್ ಹನೀಫ್, ದ.ಕ. ಜಿಲ್ಲಾ ಮದ್ರಸ ಮೆನೇಜ್ ಮೆಂಟ್ ಅಧ್ಯಕ್ಷ ಐ.ಮೊಯಿದಿನಬ್ಬ ಹಾಜಿ, ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ರಫೀಕ್ ನೇರಳಕಟ್ಟೆ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ ಸಂತಾಪ ಸೂಚಿಸಿದ್ದಾರೆ.

By suddi9

Leave a Reply

Your email address will not be published. Required fields are marked *