ಬಂಟ್ವಾಳ: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮರುಪಾವತಿ ಮುಂದೂಡಿಕೆ ಮತ್ತು ಆರು ತಿಂಗಳ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪತ್ರ ಬರೆದಿದ್ದು, ಅದೀಗ ಪರಿಶೀಲನೆಗಾಗಿ ಆರ್.ಬಿ.ಐ. ತಲುಪಿದೆ.8f2eae32-9cf7-4f8c-845e-efb50558f37a
ವಿದ್ಯಾರ್ಥಿಗಳು, ಅವರ ಹೆತ್ತವರು ಈಗಾಗಲೇ ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದು, ಈ ವೇಳೆ ಶೈಕ್ಷಣಿಕ ಸಾಲ ಮರುಪಾವತಿ ಕಷ್ಟಸಾಧ್ಯವಾಗಿದ್ದು, ಈ ಕಾರಣದಿಂದ ಸಾಲ ಮರುಪಾವತಿಯನ್ನು ಮುಂದೂಡಬೇಕು ಮತ್ತು ಬಡ್ಡಿ ಮನ್ನಾ ಮಾಡಬೇಕು ಎಂದು ಬೇಬಿ ಕುಂದರ್ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದರು.
ಅದೀಗ ಹಣಕಾಸು ಸಚಿವಾಲಯದಿಂದ ಆರ್.ಬಿ.ಐ. ಕದ ತಟ್ಟಿದ್ದು, ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ತಲುಪಿದೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಕಳುಹಿಸಿದ ಪತ್ರವನ್ನು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

By suddi9

Leave a Reply

Your email address will not be published. Required fields are marked *