ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಕಲೈಮಾರ್ ಪಿ. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಅವರು ಎಸ್‌ಐ ಆಗಿ ಪದೋನ್ನತ್ತಿಗೊಂಡು ಇದೀಗ ನಗರ ಠಾಣೆಯಲ್ಲಿ ಹಲವು ಸಮಯದಿಂದ ಖಾಲಿಯಾಗಿದ್ದ ಅಪರಾಧ ವಿಭಾಗದ ಎಸ್ ಐ ಆಗಿ ನಿಯುಕ್ತಿಗೊಂಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಕಳೆದ ೨೭ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅವರು ಈ ಹಿಂದೆ ಬೆಳ್ತಂಗಡಿ ಠಾಣೆಯಲ್ಲಿ ಎಎಸ್‌ಐಯಾಗಿ ಕಾರ್ಯನಿರ್ವಹಿಸಿದ್ದರು. ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಅವರು ಪೊಲೀಸ್ ಸ್ಟಾರ್ ತೊಡಿಸಿ ಅಧಿಕಾರ ನೀಡಿದರು. ಅಧಿಕಾರ ಸ್ವೀಕರಿಸಿದ ಬಳಿಕ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆದರು.
