ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಎಂಬಲ್ಲಿ ಸರಕಾರಿ ಜಾಗದ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸೊತ್ತುಗಳ ಸಹಿತ ಬಂಟ್ವಾಳ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.359a8461-4aaf-45f4-b612-d2e02b806a8f

ಘಟನೆಯಲ್ಲಿ ಆರೋಪಿಗಳಾದ ಶೇಖರ ಸಪಲ್ಯ, ಗಣೇಶ್ ಪೂಜಾರಿ ,ಮೋನಪ್ಪ ಹಾಗೂ ಐವನ್ ಅವರನ್ನು ಬಂಽಸಲಾಗಿದೆ. ಬಳಿಕ ಅವರಿಂದ ಮುಚ್ಚಳಿಕೆ ಬರೆಸಿ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ ೩ ಲಕ್ಷ ರೂ.ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಮ್, ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಪಿ, ರೇಖಾ, ದಯಾನಂದ, ವೀಕ್ಷಕ ಪ್ರವೀಣ್ ಹಾಗೂ ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು. ಈ ಪ್ರಕರಣ ತನಿಖೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ನಡೆಸಲಿದ್ದಾರೆ.

By suddi9

Leave a Reply

Your email address will not be published. Required fields are marked *