ಶ್ರೀನಿವಾಸಪುರ: ಮುಸ್ಲಿಂ ಸಮುದಾಯ ಕೊರೊನಾ ಸಂದರ್ಭದಲ್ಲಿ ಸರ್ಕಾರದ ನಿಯಮಾನುಸಾರ ಬಕ್ರಿದ್‌ ಆಚರಿಸಬೇಕು ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಹೇಳಿದರು.ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬಕ್ರಿದ್‌ ಆಚರಣೆ ಕುರಿತು ಕರೆಯಲಾಗಿದ್ದ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡಿದರು.IMG_20200729_134234

ಹಬ್ಬದ ಆಚರಣೆ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಬೇಕು. ಅದಕ್ಕೆ ಪೂರಕವಾದ ಪ್ರತಿಯೊಬ್ಬರೂ ಮಾಸ್ಕ್‌ ಧರಿಸಬೇಕು. ಅಂತರ ಪಾಲನೆ ಮಾಡಬೇಕು ಎಂದು ಹೇಳಿದರು. ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ.ಹಬ್ಬದ ಆಚರಣೆ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮುದಾಯದ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು. ಸಬ್‌ ಇನ್‌ಸ್ಪೆಕ್ಟರ್‌ ನಾರಾಯಣಪ್ಪ ಹಾಗೂ ಮುಸ್ಲಿಂ ಮುಖಂಡರು ಇದ್ದರು.

By suddi9

Leave a Reply

Your email address will not be published. Required fields are marked *