ಕೈಕಂಬ: ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಶಾಸಕ ಭರತ್ ಶೆಟ್ಟಿ ಅವರು ಬುಧವಾರ ಎಡಪದವು ಪದ್ರೆoಗಿ ಅಣ್ಣಪ್ಪ ಗೌಡ ಅವರ ಮನೆ ವಠಾರದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.
ಈ ಬಹುಮಾನದ ಹಣವನ್ನು ಆಯಾ ಬೂತ್ ನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸುವ ವಿನೂತನ ಯೋಜನೆಯನ್ನು ಘೋಷಿಸಿದ ಶಾಸಕರು ಸ್ವಚ್ಛ ಸುಂದರವಾದ ಪರಿಸರವನ್ನು ನನ್ನ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣ ಮಾಡಬೇಕು ಎಂಬ ಕಾಳಜಿಯ ಜತೆಗೆ ಬೂತ್ ಗಳ ಅಭಿವೃದ್ಧಿಗೂ ಸಹಕಾರಿಯಾಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಉತ್ತರ ಮಂಡಲ ಬಿಜೆಪಿ ಉಪಾಧ್ಯಕ್ಷೆ ಶ್ರೀಮತಿ ಅಮೃತ್ ಲಾಲ್ ಜೋಯೆಲ್ ಡಿ’ಸೋಜಾ, ಜಿಲ್ಲಾಪಂಚಾಯತ್ ಸದಸ್ಯ ಜನಾರ್ಧನ ಗೌಡ, ಉತ್ತರ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಅಮಿತಾ ಶೆಟ್ಟಿ, ಪ್ರಧಾನಕಾರ್ಯದರ್ಶಿ ಅರುಣಾ ಭಾಸ್ಕರ್ ಶೆಟ್ಟಿ, ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಎಡಪದವು, ಪಂಚಾಯತ್ ಮಾಜಿ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಂಗಾಧರ್,ಕಿಲೆಂಜಾರು ಗ್ರಾಮ ಶಕ್ತಿ ಕೇಂದ್ರದ ಅಧ್ಯಕ್ಷ ಜಗದೀಶ್ ಕುಲಾಲ್ ಪಾಕಾಜೆ, ರೈತ ಮೋರ್ಚಾ ಉಪಾಧ್ಯಕ್ಷ ಸತೀಶ್ ಬಳ್ಳಾಜೆ, ಪ್ರ. ಕಾರ್ಯದರ್ಶಿ ಆನಂದ ದೇವಾಡಿಗ, ಉತ್ತರ ಬಿಜೆಪಿ ಕಾರ್ಯದರ್ಶಿ ಗಣೇಶ್ ಪಾಕಾಜೆ, ಅರಣ್ಯ ಇಲಾಖೆಯ ಅಧಿಕಾರಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದ್ದರು.

