ಬಂಟ್ವಾಳ: ಬಂಟ್ವಾಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ, ನ್ಯಾಯವಾದಿ, ರಾಜಕೀಯ ಮತ್ತು ಧಾರ್ಮಿಕ ಮುಖಂಡ ಅಶೋಕ್ ಕುಮಾರ್ ಬರಿಮಾರ್ (59) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಅವರು ತಂದೆ, ತಾಯಿ, ಸಹೋದರ ಮತ್ತು ಪುತ್ರಿ ಮತ್ತು ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
IMG-20200801-WA0027 ಬಿ.ಸಿ.ರೋಡಿನಲ್ಲಿ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಜವಾಬ್ದಾರಿ ನಿಭಾಯಿಸಿದ್ದು, ಬಂಟ್ವಾಳ ಎಪಿಎಂಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕಲ್ಲಡ್ಕ ಸಮೀಪದ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿದ್ದ ಅವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಕೆಲ ಸಮಯಗಳಿಂದ ಅನಾರೋಗ್ಯದಿಂದಿದ್ದ ಅವರು, ಶುಕ್ರವಾರ ರಾತ್ರಿ ಬಿ.ಸಿ.ರೋಡಿನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಸಂತಾಪ: ಅಶೋಕ್ ಕುಮಾರ್ ಬರಿಮಾರ್ ಅವರ ನಿಧನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ, ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ರೈ,ಬೇಬಿಕುಂದರ್,ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ,ಎಪಿಎಂಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಭೂ ಬ್ಯಾಂಕ್ ನ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ ಜೈನ್ ಮೊದಲಾದವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *