ಕೋಲಾರ: ಎಸ್.ಎನ್.ಆರ್ ಆಸ್ಪತ್ರೆಗೆ ಅವಶ್ಯಕ ಇರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಕೋಲಾರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಶ್ರೀನಿವಾಸಗೌಡ ಅವರು ಹೇಳಿದರು . ಇಂದು ನಗರದ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು . ಸಚಿವರಾಗಿದ್ದಾಗ 250 ಹಾಸಿಗೆಗಳುಳ್ಳ ಆಸ್ಪತ್ರೆಯನ್ನು 450 ಹಾಸಿಗೆಗಳಿಗೆ ಏರಿಸಿದೆ . ಎಸ್.ಎನ್.ಆರ್ . ಆಸ್ಪತ್ರೆಯನ್ನು ಧರ್ಮಾಸ್ಪತ್ರೆ ಎಂತಲೂ ಕರೆಯುತ್ತಾರೆ . ಈ ಆಸ್ಪತ್ರೆಯಲ್ಲಿ ಪ್ರತಿಯೊಂದು ಕಾಯಿಲೆಗೂ ವೈದ್ಯರು ವೈದ್ಯರು ಚಿಕಿತ್ಸೆ ರೋಗಿಗಳನ್ನು ಗುಣಮುಖರಾನ್ನಾಗಿಸುತ್ತಾರೆ .MLA Hosiptal Vist Photos (2)

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೈದ್ಯರಿಗೆ ಅಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು . ನೀಡಿ ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ -19 ಸೋಂಕಿತರ ಹಾಗೂ ಹೊರ ರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು . ವಿಧಾನಪರಿಷತ್ ಸದ್ಯಸರಾದ ಗೋವಿಂದರಾಜು ಅವರು ಮಾತನಾಡಿ , ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಪ್ರಮಾಣವು ಕಡಿಮೆ ಇದೆ . ಕೋವಿಡ್ -19 ಗೆ ತುತ್ತಾಗಿರುವ ಸೋಂಕಿತರಿಗೆ ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದಾರೆ ಎಂದರು .MLA Hosiptal Vist Photos (4)

ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆಯು ಸಾಕಾಗುತ್ತಿಲ್ಲ , ಸಾಧ್ಯವಾದರೆ ಸರ್ಕಾರದ ಜತೆ ಚರ್ಚಿಸಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಪ್ರಯತ್ನ ಮಾಡಲಾಗುವುದು . ಕೋವಿಡ್ -19 ಸಂಕ್ರಾಮಿಕ ರೋಗವು ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಂಭವವಿದ್ದು ಆಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು . ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ . ವಿಜಯಕುಮಾರ್ ಅವರು ಮಾತನಾಡಿ , ಕೋವಿಡ್ -19 ಸೋಂಕಿಗೆ ತುತ್ತಾಗಿ ಜಿಲ್ಲಾಸ್ಪತ್ರೆಗೆ ದಾಖಲಾದ ಸೋಂಕಿರನ್ನು ಉತ್ತಮ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಮುಖರನ್ನಾಗಿ ಮಾಡಲಾಗುತ್ತಿದೆ .MLA Hosiptal Vist Photos (1)

ಜಿಲ್ಲಾಸ್ಪತ್ರೆಗೆ ದಾಖಲಾದ ಕೋವಿಡ್ -19 ಸೋಂಕಿತರಲ್ಲಿ ಇದುವರೆಗೂ ಮರಣ ಹೊಂದಿರುವುದಿಲ್ಲ ಎಂದು ಮಾಹಿತಿ ನೀಡಿದರು . ಕೋವಿಡ್ -19 ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 300 ಹಾಸಿಗೆಗಳು ಸಂಭ್ರಮ್ ಆಸ್ಪತ್ರೆಯಲ್ಲಿ 500 ಹಾಸಿಗೆಗಳು ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಹಾಸಿಗೆಗಳನ್ನು ಮೀಸಲಿಡಲಾಗಿದೆ . ಜಿಲ್ಲೆಯ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗಳನ್ನು ಕಾಯ್ದಿರಿಸಿ , ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ .

ಜಿಲ್ಲೆಯ ಕೆಲವು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಿ ಅಲ್ಲಿಯು ಚಿಕಿತ್ಸೆ ನೀಡಲಾಗುತ್ತಿದೆ ಎಂದರು . ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ . ನಾರಾಯಣಸ್ವಾಮಿ ಅವರು ಮಾತನಾಡಿ , 6 Body Cold Storage Mortuary Cabinate ಮತ್ತು 100 ಕೆ.ಜಿ ಸಾಮಾರ್ಥ್ಯವುಳ್ಳ  Loundry Washing Extractor  ಅವಶ್ಯಕವಾಗಿದ್ದು , ತಮ್ಮ ನಿಧಿಯಿಂದ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು . ಈ ಸಂದರ್ಭದಲ್ಲಿ ನಗರಸಭೆ ಸದ್ಯಸರಾದ ರಾಕೇಶ್ , ವೈದ್ಯರಾದ ನಾರಾಯಣಸ್ವಾಮಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಉಪಸ್ಥಿತರಿದ್ದರು .

By Suddi9

Leave a Reply

Your email address will not be published. Required fields are marked *