ಮೂಡುಬಿದರೆ : ನವೆಂಬರ್ 14, 15, 16 ರಂದು ಆಳ್ವಾಸ್ ನುಡಿಸಿರಿ-2014, ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ನಡೆಯಲಿದ್ದು, ಕನ್ನಡ ಪುಸ್ತಕ ಮಾರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಳಿಗೆಯೊಂದರ ರೂ.500 ಶುಲ್ಕವನ್ನು ನಿಗದಿಮಾಡಿದ್ದು ಆಸಕ್ತರು ಆಳ್ವಾಸ್ ನುಡಿಸಿರಿ ಹೆಸರಲ್ಲಿ ರೂ. 500 ರ ಡಿಡಿಯೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಯನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದರೆ ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ 08258-261229 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ
