ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಧ್ಯಾಹ್ನದ ವೇಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಹ್ಮದ್ ಹಾಜಿ ಅವರು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮದ್ಯಾಹ್ನದ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಬಿ.ಎ.ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ಅವರು ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿದ್ದರು.ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಸಂಘ ಸಂಸ್ಥೆಗಳು, ಮಸೀದಿಗಳ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಸಂಜೆ 3:30ರ ವೇಳೆಗೆ ತುಂಬೆ ಕಾಲೇಜಿನ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು,ಗಣ್ಯರ ಸಹಿತ ನೂರಾರು ಮಂದಿ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ತುಂಬೆ ಜುಮಾ ಮಸೀದಿಯ ಆಧೀನದ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಿತು.ಅವರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಂತಾಪ: ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ಅವರ ನಿಧನಕ್ಕೆ ಶಾಸಕರುಗಳಾದ ಯು.ಟಿ.ಖಾದರ್,ರಾಜೇಶ್ ನಾಯ್ಕ್ ಉಳಿಪಾಡಿ,ಮಾಜಿ ಸಚಿವ ರಮಾನಾಥ ರೈ,ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ.ಎಸ್.ಮಹಮ್ಮದ್,ರವೀಂದ್
