ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ” ಆರೋಗ್ಯ ಹಸ್ತ” ಕಾರ್ಯಕ್ರಮ ಮೆಲ್ಕಾರ್ ಬಿರ್ವ ಆಡಿಟೋರಿಯಂ ನಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಿ ಮಾನವೀಯತೆ ದೃಷ್ಟಿಯಿಂದ ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗ ಗೊಳಿಸುವಂತೆ ಮನವಿ ಮಾಡಿದರು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಮಾನಾಥ ರೈ ವರು ತರಬೇತುದಾರರಿಗೆ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿ ಸಾರ್ವಜನಿಕರ ಆರೋಗ್ಯ ಜತೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದರು.
ಡಾ. ರಾಜೇಶ್ ಪೂಜಾರಿ ಕೋವಿಡ್_ 19 ಸಹಾಯವಾಣಿ ಸದಸ್ಯರು ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಾರ್ವಜನಿಕರ ಮನಸನ್ನು ಗೆಲ್ಲುವಂತೆ ಕರೆ ನೀಡಿದರು ಹಾಗೂ ಪಿ ಪಿ ಇ ಕಿಟ್ ಬಳಕೆ ಮತ್ತು ಖಾಯಿಲೆ ತಪಾಸಣೆ ಮಾಡುವ ರೀತಿಯನ್ನು ವಿವರಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಏನ್. ಗಫೂರ್, ಜಿಲ್ಲಾ ತರಬೇತಿಗಾರ ರಘುರಾಜ್ ಕದ್ರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರ ಪ್ರಕಾಶ್ ಶೆಟ್ಟಿ,ಪದ್ಮಶೇಕರ್ ಜೈನ್,ತಾಲೂಕ್ ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾಲೂಕ್ ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಪದ್ಮನಾಭ ರೈ, ಇಬ್ರಾಹಿಂ ನವಾಜ್ ಉಪಸ್ಥಿತರಿದ್ದರು.

