ಬಂಟ್ವಾಳ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯವನ್ನು ನಿಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕೆಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಒತ್ತಾಯಿಸಿದ್ದಾರೆ.ಬಂಟ್ವಾಳ ಮಿನಿ ವಿಧಾನಸೌಧದ ಎದುರು ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿ, ಸಿಐಟಿಯು ಬಂಟ್ವಾಳ ತಾಲೂಕು ಸಮಿತಿ, ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದರು.

ಜನವಾದಿ ಮಹಿಳಾ ಸಂಘಟನೆಯ ದ.ಕ. ಜಿಲ್ಲಾಧ್ಯಕ್ಷೆ ಜಯಂತಿ.ಬಿ.ಶೆಟ್ಟಿ. ಮಾತನಾಡಿ ಕರೋನಾ ಮಹಾಮಾರಿಯಿಂದಾಗಿ ಉದ್ಯೋಗವಿಲ್ಲದೆ ಬದುಕುತ್ತಿರುವ ಮಹಿಳೆಯರ ಮೇಲೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ನಡೆಸುತ್ತಿದ್ದರೂ ಜಿಲ್ಲಾಡಳಿತ ಮೌನವಾಗಿರುವುದು ಯಾವ ನ್ಯಾಯವೆಂದು ಪ್ರಶ್ನಿಸಿದ ಅವರು ನ್ಯಾಯಕ್ಕಾಗಿ ಮಹಿಳೆಯರು ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಸಿಐಟಿಯು ಬಂಟ್ವಾಳ ತಾಲೂಕು ಅಧ್ಯಕ್ಷ ರಾಮಣ್ಣ ವಿಟ್ಲ ,ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯಾವಾದಿ ಶಿವಕುಮಾರ್ ಎಸ್.ಎಂ.,ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕಿ, ನ್ಯಾಯವಾದಿ ಸುಕನ್ಯಾ ಹರಿದಾಸ್, ಕರ್ನಾಟಕ ರಾಜ್ಯ ಋಣಮುಕ್ತಕ್ಕಾಗಿ ಹೋರಾಟ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಶೋಭಾ ಕೋಯಿಲ, ಬೆಳ್ತಂಗಡಿ ತಾಲೂಕು ಸ್ಥಾಪಕ ಕೊರಗಪ್ಪ ಪೂಜಾರಿ ಅಳದಂಗಡಿ, ಸಿಐಟಿಯು ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ಶೇಖರ್.ಎಲ್ ಬೆಳ್ತಂಗಡಿ ಮಾತನಾಡಿದರು.

ಪ್ರತಿಭಟನೆಯ ನೇತೃತ್ವವನ್ನು ಡಿವೈಎಫ್‌ಐ ಮುಖಂಡ, ನ್ಯಾಯವಾದಿ ತುಳಸಿದಾಸ್ ವಿಟ್ಲ, ಶ್ರೀನಿವಾಸ್ ಪೂಜಾರಿ, ಜಗದೀಶ್ ಬಂಟ್ವಾಳ, ದೇವರಾಜ್, ಪೂಜಾ, ರಹಮತ್, ಸುಭಾಷಿಣಿ, ಅಶ್ವಿನಿ, ಸೌಮ್ಯ, ಕಾವ್ಯ, ಶಂಕರಿ, ಜಯಶ್ರೀ ವಹಿಸಿದ್ದರು.ಪ್ರತಿಭಟನೆಯ ಬಳಿಕ ರಾಜ್ಯದ ಮುಖ್ಯಮಂತ್ರಿ ಅವರಿಗೆ ಬಂಟ್ವಾಳ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

