ಬಂಟ್ವಾಳ: ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದ ಕಾಲದಲ್ಲಿ ಜಾರಿಗೆ ತಂದಿದ್ದ ಭೂಸುಧಾರಣೆ,ಎಪಿಎಂಸಿ,ಕಾರ್ಮಿಕ ಕಾಯ್ದೆಯನ್ನು ತಿದ್ದುಪಡಿ ತರುವ ಮೂಲಕ ರಾಜ್ಯದ ಬಿಜೆಪಿ ಸರಕಾರ ರೈತರು,ಕಾರ್ಮಿಕ ವರ್ಗಕ್ಕೆ ಅನ್ಯಾಯವೆಸಗಿದೆ.
ಕೊರೋನ ಮಾಹಾಮಾರಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಿಫಲವಾಗಿರುವ ಸರಕಾರ ಇದರ ಹೆಸರಿನಲ್ಲಿ ಕೋಟ್ಯಾಂತರ ರೂ.ಲೂಟಿ ಮಾಡಿದೆಯಲ್ಲದೆ ನೆರೆ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿಯು ವಿಫಲವಾಗಿದೆ ಎಂದು ಆರೋಪಿಸಿದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಾಸ್ತಾವಿಸಿ,ಸ್ವಾಗತಿಸಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯರಾದ ಸಂಜೀವ ಪೂಜಾರಿ, ಮಂಜುಳಾ ಕುಶಲ ಪೆರಾಜೆ, ಧನಲಕ್ಷ್ಮೀ ಬಂಗೇರ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಲೋಸಿ ಡಿಸೋಜ, ಜಯಂತಿ ವಿ.ಪೂಜಾರಿ, ಕಿಸಾನ್ ಘಟಕ ಜಿಲ್ಲಾಧ್ಯಕ್ಷ ಮೋಹನ ಗೌಡ ಕಲ್ಮಂಜ, ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಮಾಜಿ ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯರಾದ ಲುಕ್ಮಾನ್, ವಾಸು ಪೂಜಾರಿ, ಮಹಮ್ಮದ್ ಶರೀಫ್, ಗಂಗಾಧರ, ಲೋಲಾಕ್ಷ ಶೆಟ್ಟಿ ,ಪಕ್ಷದ ಪ್ರಮುಖರಾದ ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಮೊಹಮ್ಮದ್ ನಂದಾವರ, ಮಧುಸೂಧನ ಶೆಣೈ, ಐಡಾ ಸುರೇಶ್, ವೆಂಕಪ್ಪ ಪೂಜಾರಿ, ವಿನ್ಸೆಂಟ್ ಪಿಂಟೊ, ಮಲ್ಲಿಕಾ ಪಕ್ಕಳ ಸಹಿತ ನಾನಾ ಘಟಕಗಳ ನಾಯಕರು ಉಪಸ್ಥಿತರಿದ್ದರು.ಬಳಿಕ ತಹಶೀಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.
