KAR_3731
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ನಾವೂರಿನಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು

ಬಂಟ್ವಾಳ: ಭೂ ಸುಧಾರಣೆ ಕಾಯ್ದೆ ಸಾಮಾಜಿಕ ಬದಲಾವಣೆಯ ಮೊದಲ ಹೆಜ್ಜೆ. ಈ ಕಾನೂನಿನ ತಿದ್ದುಪಡಿಯಿಂದಾಗಿ ಸಮಾಜದ ಎಲ್ಲಾ ಬಡ ವರ್ಗದವರ ಸಾಮಾಜಿಕ ಸ್ಥಿತಿಗತಿ ಸುಧಾರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈ ಹೇಳಿದರು.
ನಾವೂರು ಗ್ರಾಮಪಂಚಾಯತ್ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 10 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತ್ ನಿರ್ಮಾಣ್ ರಾಜೀವ ಗಾಂಧಿ ಸೇವಾ ಕೇಂದ್ರದ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 29 ಕೋಟಿ ರುಪಾಯಿ ವೆಚ್ಚದಲ್ಲಿ ಅನುಷ್ಠಾಣಗೊಳ್ಳಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ನಾವೂರು ಗ್ರಾಮಕ್ಕೂ ಲಭಿಸಲಿದೆ. ಮಳೆಗಾಲ ಮುಗಿದ ಕೂಡಲೇ ಸರಪಾಡಿ ರಸ್ತೆ ಕಾಮಗಾರಿ ಚುರುಕುಗೊಳ್ಳಲಿದೆ ಎಂದು ಈ ಸಂದರ್ಭ ತಿಳಿಸಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಕೇಂದ್ರ ರಸ್ತೆ ನಿಧಿ, ನಮ್ಮ ಗ್ರಾಮ ನಮ್ಮ ರಸ್ತೆ, ರಾಜೀವ ಗಾಂಧಿ ಸೇವಾ ಕೇಂದ್ರ, ಉದ್ಯೋಗ ಖಾತರಿ ಯೋಜನೆಗಳಿಗೆ ರಾಜ್ಯದಲ್ಲೇ ಅತ್ಯಧಿಕ ಅನುದಾನವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಗೊಳಿಸಲಾಗಿದೆ. ಈ ಬಗ್ಗೆ ಯಾವುದೇ ಸಂಶಯವಿದ್ದರೆ ಮಾಹಿತಿ ಹಕ್ಕಿನಲ್ಲಿ ವಿವರ ತಿಳಿದುಕೊಳ್ಳಬಹುದು ಎಂದ ಸಚಿವರು ಅಭಿವೃದ್ದಿಗಾಗಿ ರಾಜಕೀಯ ಬಿಟ್ಟು ಎಲ್ಲರೂ ಸಂಘಟಿತರಾಗಬೇಕು ಎಂದು ಕರೆ ನೀಡಿದರು.

KAR_3708
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ನಾವೂರಿನಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು

ಪಂಚಾಯತ್ ಅಧ್ಯಕ್ಷ ಬೇಬಿ ಸುವರ್ಣ ಅಧ್ಯಕ್ಷತೆ ವಹಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಯಶವಂತ ಡಿ., ಉಪಾಧ್ಯಕ್ಷೆ ವಿಲಾಸಿನಿ, ಕಾರ್ಯನಿವರ್ಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ಜಿ.ಪಂ.ಸದಸ್ಯೆ ಗಿರಿಜಾ, ತಾ.ಪಂ.ಸದಸ್ಯ ಪದ್ಮಶೇಖರ್ ಜೈನ್, ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಅಕ್ರಮ ಅಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಿ.ಎಚ್. ಖಾದರ್, ಕಿರಿಯ ಇಂಜಿನಿಯರ್ ಕೃಷ್ಣ, ಪಂ. ಕಾರ್ಯದಶರ್ಿ ಶೇಖರ್ ಹಾಗೂ ಪಂಚಾಯತ್ ಸದಸ್ಯರು ಹಾಜರಿದ್ದರು. ಗ್ರಾ.ಪಂ.ಸದಸ್ಯೆ ಲೀನಾ ಸುನೀತಾ ರೊಡ್ರಿಗಸ್ ಸ್ವಾಗತಿಸಿದರು, ಪಂ.ಅಭಿವೃದ್ದಿ ಅಧಿಕಾರಿ ಅಬೂಬಕ್ಕರ್ ವಂದಿಸಿದರು. ಮಂಜುವಿಟ್ಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕಿಂತ ಮುಂಚಿತವಾಗಿ ಸಚಿವರನ್ನು ಮೆರವಣಿಗೆಯ ಮೂಲಕ ಸಭಾವೇದಿಕೆಗೆ ಕರೆತರಲಾಯಿತು.

By Suddi9

Leave a Reply

Your email address will not be published. Required fields are marked *