ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ವತಿಯಿಂದ  ಅನಂತಾಡಿ ಯುವಕ ಮಂಡಲದ ಸಹಯೋಗದೊಂದಿಗೆ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಹಾಗೂ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯುವಕ ಮಂಡಲದ ಕಚೇರಿಯಲ್ಲಿ ರವಿವಾರ ನಡೆಯಿತು. ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿದರಲ್ಲದೆ ಇದರ ಪ್ರಯುಕ್ತ ಪರಿಸರದಲ್ಲಿ ಸಸಿಯನ್ನು ನೆಟ್ಟರು.

IMG-20200823-WA0022
ಈ ಸಂದರ್ಭದಲ್ಲಿ ಪಾಣೆಮಂಗಳೂರು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ ವಿ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಮಂಜುಳಾ ಮಾವೆ, ಅನಂತಾಡಿ ಯುವಕ ಮಂಡಲದ ಅಧ್ಯಕ್ಷ ಕಿರಣ್ ಹೆಗ್ಡೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್,  ಶಿವರಂಜನ್ಬಾಳಿಕೆ,ನಾರಾಯಣ ಸಾಲ್ಯಾನ್,ತುಂಬೆ ಕಾಲೇಜಿನ ಪ್ರಾಂಶುಪಾಲರಾದ  ಗಂಗಾಧರ್ ಅಳ್ವ, ಮನೋಹರ್ ರೈ,ನಿರಂಜನ್ ರೈ,  ಅನಂತಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ  ಉಪಸ್ಥಿತರಿದ್ದರು.ಇದೇ ವೇಳೆ ಸ್ಥಳೀಯರಿಗೆ ಸಸಿಗಳನ್ನು ವಿತರಿಸಲಾಯಿತು.

By suddi9

Leave a Reply

Your email address will not be published. Required fields are marked *