ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ತಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಹೆಚ್.ಕೆ ವಹಿಸಿ ಮಾತನಾಡಿ,ಮಾಜಿ ಪ್ರಧಾನಿ ದಿವಂಗತ ರಾಜೀವ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಾದ್ಯಂತ ಈ ದಿನ ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ. ಅವರ ಆದರ್ಶಗಳನ್ನು ಪಾಲಿಸಿ, ಭಾರತಾಂಬೆಯ ಮಕ್ಕಳಾದ ನಾವೆಲ್ಲರೂ ಜಾತಿ, ಧರ್ಮ, ಮತ, ಪಂಥ, ಭಾಷೆ ಹಾಗೂ ಪ್ರಾಂತೀಯ ಭೇದ ಭಾವಗಳನ್ನು ಮರೆತು ಒಬ್ಬರನ್ನೊಬ್ಬರು ಗೌರವಿಸಬೇಕು ಎಂದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ದೇವಿಪ್ರಸಾದ್ ರವರು ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಉಪನ್ಯಾಸಕರಾದ ನಸೀಮಾ ಬೇಗಂ,ಎಸ್, ಡಾ.ಶ್ರೀನಿವಾಸ, ಹನುಮಂತಯ್ಯ ಜಿ.ಹೆಚ್, ವಿನಯ್ ಎಂ.ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
