ಕೈಕಂಬ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ವಾಸವಾಗಿರುವ ಮಿಜಾರು ಪಯ್ಯರಬೆಟ್ಟು ಪಿ ಜನಾರ್ಧನ ಶೆಟ್ಟಿಗಾರ್ (76) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.27 ರಂದು ಗುರುವಾರ ನಿಧನರಾದರು.
ಹಲಾವಾರು ವರ್ಷಗಳಿಂದ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್(ರಿ) ಅಮ್ಮುಂಜೆ ಇದರ ಅಧ್ಯಕ್ಷರಾಗಿ, ಭಾರತೀಯ ಜನತಾ ಪಾರ್ಟಿ ಅಮ್ಮುಂಜೆ ಗ್ರಾಮ ಸಮಿತಿ ಅಧ್ಯಕ್ಷರಾಗಿ ಮಿಜಾರು ಪಯ್ಯರಬೆಟ್ಟು ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಹಾಗೂ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸಿಬ್ಬಂಧಿಯಾಗಿ ,ಶ್ರೀ ವಿನಾಯಕ ಸದಾಶಿವ ಜನಾರ್ಧನ ದೇವಸ್ಥಾನದಲ್ಲಿ ಸೇವಾಕಾರ್ಯಗಳಲ್ಲಿ ಹಲಾವಾರು ವರ್ಷಗಳಿಂದ ಸೇವೆ ಸಲ್ಲಿಸಿದ ಅವರಿಗೆ ಪತ್ನಿ ಇಬ್ಬರು ಪುತ್ರರು, ಸೊಸೆಯಂದಿರು, ಸಹೋದರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಂತಾಪ ಸೂಚನೆ:
ಬಂಟ್ವಾಳ ಬಿಜೆಪಿ ಶಾಸಕ ರಾಜೇಶ್ ನಾಯ್ಕ್, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ,ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮಂಡಳಿ, ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದ ಆಡಳಿತ ಮಂಡಳಿ, ಶ್ರೀ ವಿನಾಯಕ ಸದಾಶಿವ ಜನಾರ್ಧನ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಹಲಾವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.
