ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದಲ್ಲಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಣಿ ಅಭಿಯಾನವು
ಪ್ರದಾನ ಮಂತ್ರಿ ನರೇಂದ್ರ ಮೋದಿಜಿಯವರ ಈ ಒಂದು ಯೋಜನೆಯಾಗಿದ್ದು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸುವ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಕ್ಷೇತ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ ಹೇಳಿದರು.
ಅವರು ಬಿಜೆಪಿ ಬಡಗಬೆಳ್ಳೂರು ವತಿಯಿಂದ ಆ.30ರಂದು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂಧರ್ಭದಲ್ಲಿ ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

