ಬಂಟ್ವಾಳ: ಸಜೀಪ ಮೂಡ ಗ್ರಾಮದ ಕಜೆ ಶ್ರೀರಾಮ ಭಜನಾ ಮಂದಿರ ಹಾಗೂ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಜಂಟಿ ಸಹಯೋಗದಲ್ಲಿ ಭಾರತ ಸರಕಾರದ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ನೋಂದಾವಣಿ ಹಾಗೂ ವಿತರಣೆಯು ಕಜೆ ಶ್ರೀರಾಮ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.
ಭಜನಾ ಮಂದಿರದ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಪಡೀಲ್ ಅಧ್ಯಕ್ಷತೆ ವಹಿಸಿದ್ದರು.ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಉಮಾನಾಥ ರೈ ಮೇರಾವು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಅಧ್ಯಕ್ಷ ಲಯನ್ ಬಾಲಕೃಷ್ಣ ಶೆಟ್ಟಿ ಖಂಡಿಗ ಆಯುಷ್ಮಾನ್ ಕಾಡ್೯ ವಿತರಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಸುಮಾರು ೨೫೦ ಜನರಿಗೆ ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು ಭಜನಾ ಮಂದಿರದ ಕಾರ್ಯದರ್ಶಿ ಜಯಪ್ರಕಾಶ್ ರೈ ಮೇರಾವು ಸ್ವಾಗತಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ. ರವೀಂದ್ರ ಕುಕ್ಕಾಜೆ ವಂದಿಸಿದರು.
