ಬಂಟ್ವಾಳ : ಇಲ್ಲಿಯ ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ನಿಧನರಾದ ಶ್ರೀಧರ್ ಇವರಿಗೆ ಬಂಟ್ವಾಳ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಕಛೇರಿ ಸಿಬ್ಬಂದಿಗಳು ಪುಷ್ಪ ನಮನದೊಂದಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್ ಆರ್ ರವರು ಎಲ್ಲರೊಂದಿಗೂ ನಗು ನಗುತ್ತಾ ಬೆರೆಯುತ್ತಿದ್ದ ಉಪತಹಶೀಲ್ದಾರರ ಅನಿರೀಕ್ಷಿತ ಅಗಲಿಕೆ ಎಲ್ಲರಿಗೂ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ . ಎಲ್ಲರಿಗೂ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಆಶಿಸಿದರು. ಈ ವೇಳೆ ತಾಲೂಕು ಕಛೇರಿ ಸಿಬ್ಬಂದಿಗಳು ತಮ್ಮ ಸಹೋದ್ಯೋಗಿಯ ಅಗಲಿಕೆಯಿಂದ ಒಂದು ಕ್ಷಣ ಭಾವುಕರಾದರು.
ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು, ಸಿಬ್ಬಂದಿಗಳು, ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು .
