ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು. ಲೊರೆಟ್ಟೊ ಮಾತಾ ಚರ್ಚ್ ನಲ್ಲಿಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತ ಅವರು, ವಂ. ರೊಯ್ಸ್ಟನ್ ಮತ್ತು ಭಕ್ತರೊಂದಿಗೆ ಬಲಿಪೂಜೆಯನ್ನು ಅರ್ಪಿಸಿದರೆ ಅಲ್ಲಿಪಾದೆ ಸಂತ ಅಂತೋನಿ ಚಚ್೯ನಲ್ಲಿ ಧರ್ಮಗುರು ಪೆಡ್ರಿಕ್ ಮೊಂತೆರೋ ಅವರು ಬಲಿಪೂಜೆ ಅರ್ಪಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಆದೇಶದಂತೆ ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವುದನ್ನು ರದ್ದುಪಡಿಸಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. 
