ಬಂಟ್ವಾಳ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ 2017-18 ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಮಂಜೂರುಗೊಂಡ 15 ಲಕ್ಷ ರೂ.ವೆಚ್ಚದಲ್ಲಿ ಪಂಜಿಕಲ್ಲು ಗ್ರಾಮದ ನೀರಪಲ್ಕೆ ಮುಕ್ಕುಡ ರಸ್ತೆ ಕಾಮಗಾರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ರವರು ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಭೂಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಪ್ರಕಾಶ್ ಜೈನ್, ತಾಲೂಕು ಪಂಚಾಯತ್ ಸದಸ್ಯರಾದ ಪದ್ಮಾವತಿ ಪೂಜಾರಿ, ಪಂಚಾಯತ್ ಸದಸ್ಯರಾದ ಸುರೇಶ್ ಪೂಜಾರಿ ಜೋರ, ಸದಾನಂದ ಶೆಟ್ಟಿ, ಕೇಶವ ಪೂಜಾರಿ, ರವಿ ಪೂಜಾರಿ, ಪ್ರಮುಖರಾದ ಮೆಲ್ವಿನ್ ಲೋ ಬೋ, ಜೋಸ್ಸಿ ಪಿಂಟೋ, ಪುರುಷೋತ್ತಮ ಪೂಜಾರಿ ರಮೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು
