ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮ ಪಂಚಾಯತಿನಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಒಣ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವಾಗುತ್ತಿದ್ದು. ಈ ಬಗ್ಗೆ ಗ್ರಾಮಸ್ಥರಿಗೆ ಅರಿವನ್ನು ಮೂಡಿಸುವ ಸಲುವಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ನೋಡಲ್ ಅಧಿಕಾರಿಯವರು ಮತ್ತು ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ ಶ್ರೀ ಜನಾರ್ಧನ್ ಗೌಡ, ಪಂಚಾಯತ್ ಆಡಳಿತಾಧಿಕಾರಿ ಶ್ರೀ ನರೇಂದ್ರ C.R, ಇತರ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
