ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು  ಸೆ.19 ಶನಿವಾರ  ನಿಧನರಾದ ರಾಧಾಕೃಷ್ಣ ಇವರಿಗೆ ಬಂಟ್ವಾಳ ಮಿನಿ ವಿಧಾನ ಸೌಧದಲ್ಲಿ ತಾಲೂಕು ಕಛೇರಿ ಸಿಬ್ಬಂದಿಗಳು ಮೌನ ಪ್ರಾರ್ಥನೆ ಮತ್ತು ಪುಷ್ಪ ನಮನದೊಂದಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದರು.7d92b80d-f3dc-49d5-8015-9944447c67e3

ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಎಸ್ ಆರ್ ರವರು ಬೇರೆ ಬೇರೆ ತಾಲೂಕಿನಲ್ಲಿನಿಷ್ಠಾವಂತರಾಗಿ ಕರ್ತವ್ಯ ಸಲ್ಲಿಸಿದ ಬಂಟ್ವಾಳದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರರಾಗಿ ಸೇವೆ ಸಲ್ಲಿಸಿದ ಇವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತ ಎಲ್ಲರಿಗೂ ನೀಡಲಿ ಎಂದು ಗದ್ಗದಿತರಾಗಿ ಹೇಳಿದರು.6dedafcb-51c1-4b8e-adbb-b10ecaf51b36

ಬಂಟ್ವಾಳ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಉಮಾನಾಥ ರೈ ಮೇರಾವು ಮಾತನಾಡಿ ನೌಕರ ಸ್ನೇಹಿಯಾಗಿ ಸರಳತೆಯಿಂದ ಕರ್ತವ್ಯ ನಿರ್ವಹಿಸಿದ ಶ್ರೀ ಯುತ ರಾಧಾಕೃಷ್ಣರವರ ಅಗಲಿಕೆ ತುಂಬಲಾಗದ ನಷ್ಟ ಉಂಟು ಮಾಡಿದೆ ಎಂದರು.ಈ ವೇಳೆ ತಾಲೂಕು ಕಛೇರಿ ಸಿಬ್ಬಂದಿ ಗಳು,ತಾಲೂಕು ಕಛೇರಿ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು. ಗ್ರಾಮಕರಣಿಕರು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರ್ವಹಿಸಿದರು .

By suddi9

Leave a Reply

Your email address will not be published. Required fields are marked *