ಬಂಟ್ವಾಳ:   ರಾಜ್ಯ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಕೃಷಿಕರ, ನೆರೆಪೀಡಿತರ ಮತ್ತು ಜನಸಾಮಾನ್ಯರ ಪರವಾಗಿಲ್ಲ ಎಂದು ಆರೋಪಿಸಿ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ಪಾಣೆಮಂಗಳೂರು ಮತ್ತು ಬಂಟ್ವಾಳ  ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.DSC_9956
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಅಂತ್ಯಸಂಸ್ಕಾರಕ್ಕೆ ನೀಡುವ ಹಣವನ್ನೂ ಒದಗಿಸಲು ಆಗಿಲ್ಲ, ಬಡವರಿಗೆ ಒಂದೇ ಒಂದು ಮನೆ ನೀಡದೆ, ಜಾಹೀರಾತು ಮೂಲಕ ಪ್ರಚಾರ ಗಿಟ್ಟಿಸಿಕೊಂಡಿದೆ. ಬಡವರ, ಕೂಲಿಕಾರ್ಮಿಕರ, ನೆರೆ ಪೀಡಿತರಿಗೆ ಹಾಗೂ ಜನಸಾಮಾನ್ಯರಿಗೆ ಸರ್ಕಾರ ತಲುಪೇ ಇಲ್ಲ ಎಂದು ಟೀಕಿಸಿದರು.  ಉಚಿತ ಅಕ್ಕಿ ಯೋಜನೆಯನ್ನು ಜಾರಿಗೆ ತಂದದ್ದೇ ಕಾಂಗ್ರೆಸ್ ಸರ್ಕಾರ. ಇಂದಿರಾ ಕ್ಯಾಂಟೀನ್, ಭೂಮಸೂದೆಯಂಥ ಕಾನೂನುಗಳ ಮೂಲಕ ಬಡವರ ಪರವಾಗಿದ್ದರೆ, ಬಿಜೆಪಿಯವರು ಕೇವಲ ಟೀಕೆ ಮಾಡುವುದರಲ್ಲೇ ಕಾಲ ಕಳೆದರು. ಕೇಂದ್ರ, ರಾಜ್ಯಗಳೆರಡರಲ್ಲೂ ಅಧಿಕಾರ ಹೊಂದಿದರೂ ಯಾವುದೇ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ, ಭರವಸೆಗಳು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ ಎಂದು ಅವರು ಹರಿಹಾಯ್ದರು.DSC_9959
ಬಿಜೆಪಿ ಸರಕಾರ ಬಂದ ಬಳಿಕ ಯಾವೊಬ್ಬ ಬಡವನಿಗೂ ಮನೆ ಸಿಕ್ಕಿಲ್ಲ. ಕಳೆದ ಎರಡು ವರ್ಷದಿಂದ ಅಂತ್ಯ ಸಂಸ್ಕಾರಕ್ಕೆ ನೀಡುವ ಹಣವನ್ನೂ ಈ ಸರಕಾರ ನೀಡುತ್ತಿಲ್ಲ, ಪೊಲೀಸರಿಗೆ ನೀಡುತ್ತಿದ್ದ ಭತ್ಯೆಯನ್ನೂ ನಿಲ್ಲಿಸಿದ್ದು, ಕೇವಲ ಘೋಷಣೆಯನ್ನಷ್ಟೇ ಮಾಡುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ವ್ಯಾಪಕವಾಗಿ ಮರಳುಗಾರಿಕೆಯು ಅನಧಿಕೃತವಾಗಿ ನಡೆಯುತ್ತಿದೆ. 2 ಸಾವಿರ ರೂಪಾಯಿಗೆ ಮರಳು ಎಂದು ಒಂದು ದಿನ ಹೇಳಿದರೆ, ಬಳಿಕ ಹಾಗಲ್ಲ  ಯುನಿಟ್ ಗೆ ಎಂದು ವರಸೆ ಬದಲಾಯಿಸಿದರು ಎಂದು ಲೇವಡಿ ಮಾಡಿದರು.
ಜಿಲ್ಲಾ ಪಂಚಾಯಿತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ,ಎಂ.ಎಸ್.ಮಹಮಹಮ್ಮದ್ ಮಾತನಾಡಿ ರಾಜ್ಯಸರಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಜನರ ಮೇಲೆ ಸವಾರಿ ಮಾಡುತ್ತಿದೆ ಎಂದು ಆರೋಪಿಸಿದರು. ಮುಂದಿನ ದಿನಗಳಲ್ಲಿ ಗ್ರಾಪಂ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಅತ್ಯಧಿಕ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡುವಂತೆ ಕರೆ ನೀಡಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪ್ರಸ್ತಾವಿಸಿ,ಸ್ವಾಗತಿಸಿದರು.ಪಕ್ಷದ ಪ್ರಮುಖರಾದ ಚಂದ್ರಶೇಖರ ಪೂಜಾರಿ, ಸುರ್ದಶನ ಜೈನ್, ಬಿ.ಎಂ.ಅಬ್ಬಾಸ್ ಆಲಿ, ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಪದ್ಮನಾಭ ರೈ, ಪ್ರಶಾಂತ್  ಕುಲಾಲ್, ಮಾಯಿಲಪ್ಪ ಸಾಲ್ಯಾನ್, ಚಿತ್ತರಂಜನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ಲುಕ್ಮಾನ್, ವೆಂಕಪ್ಪ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಜೆಸಿಂತ ಡಿಸೋಜಾ, ಜಗದೀಶ್ ಕುಂದರ್, ಐಡಾ ಸುರೇಶ್, ಮಹಮ್ಮದ್ ನಂದರಬೆಟ್ಟು, ವಿನಯ ಕುಮಾರ್, ಮಧುಸೂದನ್ ಶೆಣೈ, ಸಂಜೀವ ಪೂಜಾರಿ, ವಾಸು ಪೂಜಾರಿ, ಗಂಗಾಧರ್ ಪೂಜಾರಿ, ವೆಂಕಪ್ಪ ಪೂಜಾರಿ ಬಂಟ್ವಾಳ,ಜಗನ್ನಾಥ ತುಂಬೆ,ವಿನಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಬಳಿಕ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

By Suddi9

Leave a Reply

Your email address will not be published. Required fields are marked *