ಬಂಟ್ವಾಳ ತಾಲೂಕಿನ ಐತಿಹಾಸಿಕ ಹಿನ್ನೆಲೆ ಯುಳ್ಳ ಸಜಿಪ ಮೂಡ ಗ್ರಾಮದ ತುಳುನಾಡಿನ ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ಆಡಳಿತಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಇಂದು ಗುರುವಾರ ಅಧಿಕಾರ ಸ್ವೀಕರಿಸಿದರು.
ಪಣೋಲಿಬೈಲ್ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ದೈವಸ್ಥಾನಕ್ಕೆ ಭೇಟಿಯಿತ್ತು ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಹಾಗೂ ದೈವಸ್ಥಾನಕ್ಕೆ ಸಂಬಂಧಿಸಿದ ಅರ್ಚಕವರ್ಗ, ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
