ಬಂಟ್ವಾಳ : ರಾಜ್ಯ ಹಾಗೂ ಕೇಂದ್ರ ಸರಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ಸೋಮವಾರ ಬಿ.ಸಿ.ರೋಡಿನ ಮೇಲ್ಸ್ ತುವೆಯ ಕೆಳಭಾಗದಲ್ಲಿ ನಡೆಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿ, ಬಂಟ್ವಾಳ ಕ್ಷೇತ್ರ ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ, ಸಿಪಿಐ, ಎಸ್‌ಡಿಪಿಐ, ಡಿವೈಎಫ್‌ಐ, ಎಐವೈಎಫ್, ಮಾನವ ಬಂಧುತ್ವ ವೇದಿಕೆ, ಪ್ರಜಾ ಪರಿವರ್ತನಾ ವೇದಿಕೆ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಮೊದಲಾದ ಸಂಘಟನೆಗಳು ಪಾಲ್ಗೊಂಡಿದ್ದವು.
ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸದಸ್ಯ ಸಂಜೀವ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್, ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಜೆಡಿಎಸ್‌ನಿಂದ ರಾಜ್ಯ ಜಂಟಿ ಕಾರ್ಯದರ್ಶಿ ಇಬ್ರಾಹಿಂ ಗೋಳಿಕಟ್ಟೆ, ಹಾರೂನ್ ರಶೀದ್, ಪಿ.ಎ.ರಹೀಂ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅನ್ವರ್ ಸಾದತ್, ಜಿಲ್ಲಾಧ್ಯಕ್ಷ ಅತಾವುಲ್ಲಾ ಜೋಕಟ್ಟೆ, ಕಾರ್ಮಿಕ ಮುಖಂಡ ರಾಮಣ್ಣ ವಿಟ್ಲ, ಡಿವೈಎಸ್‌ಐ ಅಧ್ಯಕ್ಷ ಸುರೆಂದ್ರ ಕೋಟ್ಯಾನ್, ಕಾರ್ಯದರ್ಶಿ ತುಳಸೀದಾಸ್ ವಿಟ್ಲ, ಸಮಾನ ಮನಸ್ಕ ಸಂಘಟನೆಗಳ ಪ್ರಭಾಕರ ದೈವಗುಡ್ಡೆ, ಬಿ.ಶೇಖರ್, ಮಾನವ ಬಂಧುತ್ವ ವೇದಿಕೆಯ ರಾಜಾ ಚಂಡ್ತಿಮಾರ್, ದಲಿತ ಸಂಘರ್ಷ ಸಮಿತಿಯ ಸೇಸಪ್ಪ ಬೆದ್ರಕಾಡು, ಪುರಸಭಾ ಸದಸ್ಯರು, ವಿವಿಧ ಸಂಘಟನೆಗಳ ಮುಂದಾಳುಗಳು ಉಪಸ್ಥಿತರಿದ್ದರು. ಕೊನೆಗೆ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು ಹೆದ್ದಾರಿ ತಡೆಗೆ ಮುಂದಾದಾಗ ಪೊಲೀಸರು ತಡೆದು, ಅವರ ಮನವೊಲಿಸಿದರು.
