ಕೋಲಾರ: ಶೆಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಶಾಖೆ ವತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಕೋಲಾರ ಜಿಲ್ಲಾಧ್ಯಕ್ಷ ಸಿ.ಸೋಮಶೇಖರ್ ಐದು ತಾಲ್ಲೂಕುಗಳ ಅಧ್ಯಕ್ಷರನ್ನು ಆಯ್ಕೆಮಾಡಿ, ನೇಮಕಾತಿ ಆದೇಶ ಪತ್ರ ನೀಡಿದರು.
ಶೆಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕೋಲಾರ ತಾಲ್ಲೂಕು ಅಧ್ಯಕ್ಷರಾಗಿ ವಿ.ಶ್ರೀನಿವಾಸ್, ಶ್ರೀನಿವಾಸಪುರ ತಾಲ್ಲೂಕು ಅಧ್ಯಕ್ಷರಾಗಿ ಎಂ.ರೆಡ್ಡಪ್ಪ, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷರಾಗಿ ಕೆ.ಎಂ.ಮಂಜುನಾಥ್, ಮುಳಬಾಗಿಲು ತಾಲ್ಲೂಕು ಅಧ್ಯಕ್ಷರಾಗಿ ಶಿವಣ್ಣ, ಕೆ.ಜಿ.ಎಫ್ ತಾಲ್ಲೂಕು ಅಧ್ಯಕ್ಷರಾಗಿ ಮಾರಸಂದ್ರ ಬಾಬುರವರನ್ನು ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಪ್ರದೇಶ ಕುರುಬರ ಸಂಘದ ನಿದೇರ್ಶಕರಾದ ಅಪ್ಪೇಗೌಡ, ಕೆ.ಎನ್.ಸರಸ್ವತಿ, ಕುರುಬರ ಸಂಘದ ತಾಲೂಕು ಅಧ್ಯಕ್ಷರಾದ ಮುನಿಸ್ವಾಮಿ, ರಾಮಕೃಷ್ಣಪ್ಪ, ಶಾಂತಮ್ಮ, ಶೆಫಡ್ರ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಕಾರ್ಯದರ್ಶಿ ಸಿ.ಎಸ್.ಸಾಗರ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
