ಬಂಟ್ವಾಳ :ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಇದರ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಬಿ ಸಿ ರೋಡಿನ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

89bae28d-e838-44b0-a5d7-70c0056fd1caಆರೋಗ್ಯ ಇಲಾಖೆ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಅರೆವೈದ್ಯಕೀಯ ಮತ್ತು ಇತರ ನಿರ್ವಹಣೆ ಹಾಗೂ ಕಚೇರಿ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಅವರ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದ್ದು, ಶಾಂತಿಯುತವಾಗಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ಮಾಡುತ್ತಿದ್ದು , 5ನೇ ದಿನಕ್ಕೆ ಕಾಲಿಟ್ಟಿದೆ.‌ಆದರೆ ಇದುವರೆಗೂ ಸರಕಾರ ಸ್ಪಂದಿಸದಿರುವುದರಿಂದ ಸಾರ್ವಜನಿಕರು ಆರೋಗ್ಯಸೇವೆ ವಂಚಿತರಾಗಿದ್ದು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಇಲಾಖೆಯಲ್ಲಿ ಉತ್ತಮ ಸೇವೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.e68610ce-ce96-4ea6-b59a-c4224fc0a951

ಸಂಘದ ಅಧ್ಯಕ್ಷ ಡಾ. ಪ್ರಕಾಶ್ ಕುಮಾರ್ ಕಾರ್ಯದರ್ಶಿ ವಿಶ್ವನಾಥ ಪ್ರಮುಖರಾದ ಶಿಲ್ಪ ಬಿ.ರಾವ್, ಡಾ.ಹೇಮ ಪ್ರಭ, ಡೇವಿಡ್ ಡಿಸೋಜಾ ಮತ್ತಿತರರು ಹಾಜರಿದ್ದರು. ಬಳಿಕ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಬೂಡ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಮೊದಲಾದವರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

By suddi9

Leave a Reply

Your email address will not be published. Required fields are marked *