ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಾಳ್ತಿಲ ವಲಯ ಕಾಂಗ್ರೆಸ್ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್,ಮಾಜಿ ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ,ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಕನಪಾಡಿ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ವಲಯಾಧ್ಯಕ್ಸರು ಸೀನಪ್ಪ ಪೂಜಾರಿ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್,ಉಪಾಧ್ಯಕ್ಷ ರಝಕ್ ನೀರಪಾದೆ,ಬ್ಲಾಕ್ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ಬಾಳ್ತಿಲ ಮೊದಲಾದವರು ಉಪಸ್ಥಿತರಿದ್ದರು.
