ಬಂಟ್ವಾಳ: ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರಕ್ಕೆ ಸಂಬಂಧಿಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಅಗ್ರಹಿಸಿ ಮತ್ತು ಅತ್ಯಾಚಾರಿಗಳಿಗೆ ಕಠಿಣ ಕಾನೂನು ರಚಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ಚಾಳ ಘಟಕದ ವತಿಯಿಂದ ಬಿಸಿರೋಡು ಮಿನಿವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.IMG-20201005-WA0061

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ವಿದ್ಯಾರ್ಥಿ ನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ ಹಾಗೂ ದೇಶದಲ್ಲಿ ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಿರಲು ಅತ್ಯಾಚಾರಿಗಳಿಗೆ ಕಠಿಣ ಕಾನೂನನ್ನು ಜಾರಿಗೊಳಿಸಬೇಕು ಎಂದು ಅ.ಭಾ.ವಿ.ಪ.ಆಗ್ರಹಿಸುತ್ತದೆ.

IMG-20201005-WA0059ಹಾಗೂ ಉತ್ತರ ಪ್ರದೇಶದ ಘಟನೆಯನ್ನು ಫಾಸ್ಟ್ ಟ್ರಾಕ್ ನ್ಯಾಯಲಯದ ಮೂಲಕ ತನಿಖೆ ನಡೆಸಿ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ ಎಂದು ಪ್ರತಿಭಟನೆಕಾರರು ಆಗ್ರಹಿಸದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ತಾಲೂಕು ಸಂಚಾಲಕ ಹರ್ಷಿತ್ ಕೊಯಿಲ ಸೇರಿದಂತೆ ಸಂಘಟನೆಯ ಪ್ರಮುಖರು ಉಪಸ್ಥಿತಿ ರಿದ್ದರು.

By suddi9

Leave a Reply

Your email address will not be published. Required fields are marked *