ಬಂಟ್ವಾಳ: ಕಳೆದ ಎರಡು ವರ್ಷದಲ್ಲಿ  ಮಾಣಿ ಗ್ರಾಮಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 2 ಕೋಟಿ ರೂ.ಅನುದಾನ ಒದಗಿಸಲಾಗಿದ್ದು,ಬಹುತೇಕ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿದೆ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ. ಭಾನುವಾರ  ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಣಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬದಿಗುಡ್ಡೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ರಿದ್ದರು.          IMG-20201011-WA0027   

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 14 ಮತ್ತು 15 ಹಣಕಾಸು ಯೋಜನೆಯಡಿ ಗ್ರಾಪಂಗೆ ನೇರ ಅನುದಾನ ಒದಗಿಸುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಮಹತ್ತರವಾದ ಕೊಡುಗೆಯನ್ನು  ನೀಡಿದ್ದಾರೆ ಎಂದರು. ಮಾಣಿ ಗ್ರಾಮದಲ್ಲಿ ಕೇಂದ್ರ ಸರಕಾರದ ಕೃಷಿ ಸಮ್ಮಾನ್ ಯೋಜನೆಯಡಿ 416 ಫಲಾನುಭವಿಗಳಿದ್ದು ವಾರ್ಷಿಕವಾಗಿ ತಲಾ 10000ದಂತೆ  ಸಹಾಯಧನ ಪಡೆಯುತ್ತಿದ್ದಾರೆ.

ಇತ್ತೀಚೆಗೆ ನಡೆದ ಆಯುಷ್ಮಾನ್ ಕಾರ್ಡ್ ಅಭಿಯಾನದಲ್ಲಿ 1200 ಜನರಿಗೆ ಉಚಿತ ಕಾರ್ಡ್ ನ್ನು ಮಾಣಿ ಬಿಜೆಪಿ ವತಿಯಿಂದ ವಿತರಿಸಲಾಗಿದೆ ಎಂದ ಶಾಸಕರು ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾಣಿ ಗ್ರಾಪಂನಲ್ಲಿ ಮತ್ತೊಮ್ಮೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣವನ್ನು ಜನತೆ ಬೆಂಬಲಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಕಿಯೋನಿಕ್ಸ್ ನಿಗಮದ ಅಧ್ಯಕ್ಷ ರಾದ ಹರಿಕೃಷ್ಣ ಬಂಟ್ವಾಳ್,ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿಯ ನಿರ್ದೇಶಕಿ ಸುಲೋಚನ ಜಿ.ಕೆ ಭಟ್,ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ವಿಟ್ಲಪಡ್ನೂರು,ಡೊಂಬಯ ಅರಳ ಪ್ರಮುಖರಾದ ಗಣೇಶ್ ರೈ ಮಾಣಿ,ಪುಷ್ಪರಾಜ್ ಚೌಟ,ನಾರಾಯಣ ಶೆಟ್ಟಿ,ಹರೀಶ್ ಕುಲಾಲ್, ನಾರಾಯಣ ಭಟ್,ಮಹಾಬಲ ಚೌಟ ಮತ್ತು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *