ಕುಪ್ಪೆಪದವು: ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕರು ಆಯ್ಕೆಯಾದರೆ ಕೋಮು ಗಲಭೆಗಳು ನಡೆಯುತ್ತವೆ ಎಂದು ಕಾಂಗ್ರೇಸ್ ಜನರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿತ್ತು ಆದರೆ ಜಿಲ್ಲೆಯಲ್ಲಿ ಯಾವುದೇ ಕೋಮುಗಲಭೆಗಳು ನಡೆದಿಲ್ಲ ಬದಲಾಗಿ ಅಭಿವೃದ್ಧಿ ಆಗಿದೆ.ಕೋಮುಗಲಭೆಗಳು ನಡೆಯಲು ಕಾರಣರಾಗುವ ಯಾರೇ ಆಗಲಿ ಅಂತಹವರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಅಧಿಕಾರ ನೀಡಿದ್ದೇವೆ ಎಂದು ಶಾಸಕ ಭರತ್ ಶೆಟ್ಟಿ ಹೇಳಿದ್ದಾರೆ.20201011_120458

ಅವರು ಆದಿತ್ಯವಾರ ಕುಪ್ಪೆಪದವು ಕಲ್ಲಾಡಿಯಲ್ಲಿ ನಡೆದ ಕಿಲೆಂಜಾರು ಬಿಜೆಪಿ ಶಕ್ತಿ ಕೇಂದ್ರದ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಬಿಜೆಪಿ ಯಲ್ಲಿ ಸಾಮಾನ್ಯ ಕಾರ್ಯಕರ್ತರು ನಾಯಕರನ್ನು ಪ್ರಶ್ನೆ ಮಾಡುವ ಆಂತರಿಕ ಪ್ರಜಾಪ್ರಭುತ್ವ ವಿದೆ, ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಾಯಕನನ್ನಾಗಿ ಬೆಳೆಸಲಾಗುತ್ತದೆ ಆದರೆ ಕಾಂಗ್ರೆಸ್ ನಲ್ಲಿ ಇದಕ್ಕೆ ಅವಕಾಶವೇ ಇಲ್ಲ ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ರಾಜೇಶ್ ಶೆಟ್ಟಿ ಸಲ್ಲಾಜೆ ಮಾತನಾಡಿ ಪಕ್ಷ ಬೆಳೆದು ಬಂದ ಹಾದಿ ಮತ್ತು ಮುಂದಿನ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅಗತ್ಯವಾದ ಪೂರ್ವತಯಾರಿಗಳ ಬಗ್ಗೆ ಮಾಹಿತಿ ನೀಡಿದರು. ಉತ್ತರ ಮಂಡಲ ಕಾರ್ಯದರ್ಶಿ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಗಣೇಶ್ ಪಾಕಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಪ್ಪೆಪದವು ಶಕ್ತಿ ಕೇಂದ್ರದ ಅಧ್ಯಕ್ಷ ಜಗದೀಶ್ ಕುಲಾಲ್ ಪಾಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಮಂಡಲ ಪ್ರಧಾನಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಸದಸ್ಯ ನಾಗೇಶ್ ಶೆಟ್ಟಿ, ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಸತೀಶ್ ಬಳ್ಳಾಜೆ, ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸಾದ್ ಎಂ. ಪ್ರಧಾನಕಾರ್ಯದರ್ಶಿ ಅನಿಲ್ ಪೆರಾರ, ಪ್ರಭಾರಿ ಅಮರೇಶ್ ಬೇಕಲ್, ಉತ್ತರ ಮಂಡಲ ಮಹಿಳಾ ಮೋರ್ಚಾ ಕಾರ್ಯದರ್ಶಿ ಅರುಣಾ ಭಾಸ್ಕರ್ ಶೆಟ್ಟಿ, ಎಸ್ ಟಿ ಮೋರ್ಚಾ ಸದಸ್ಯ ರಾಜೇಶ್ ನಾಯ್ಕ್ ಕಿಲೆಂಜಾರು ಉಪಸ್ಥಿತರಿದ್ದರು. ಶಕ್ತಿ ಕೇಂದ್ರದ ಉಪಾಧ್ಯಕ್ಷ ಶಿವರಾಮ್ ಶೆಟ್ಟಿ ಉಳಿಪಾಡಿ ಸ್ವಾಗತಿಸಿದರು ಜತೆಕಾರ್ಯದರ್ಶಿ ಅಶೋಕ್ ಕಟ್ಟೆಮಾರ್ ನಿರೂಪಿಸಿ ವಂದಿಸಿದರು.

By Suddi9

Leave a Reply

Your email address will not be published. Required fields are marked *