ಬಂಟ್ವಾಳ:ಪೂರ್ಣಪ್ರಮಾಣದ ವೈದ್ಯರ ಸಹಿತ ಶಾಸಕ ರಾಜೇಶ್ ನಾಯ್ಕ್ ಅವರ ಮುತುವರ್ಜಿಯಿಂದ ಸಕಲ ವ್ಯವಸ್ಥೆಯನ್ನೊಳಗೊಂಡ 100 ಬೆಡ್ ನ ಬಂಟ್ವಾಳ ತಾಲೂಕು ಸಮುದಾಯ ಆರೋಗ್ಯ ಕೇಂದ್ರಕ್ಕೆ ಇದೀಗ ನೂತನವಾಗಿ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರದ ಸೇರ್ಪಡೆಯಾಗಿದೆ. 
ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಲ್ಟ್ರಾಸೌಂಡ್ ಸ್ಕಾನಿಂಗ್ ಯಂತ್ರದ ಅಗತ್ಯತೆಯ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಯವರಿಗೆ ಶಾಸಕ ರಾಜೇಶ್ ನಾಯ್ಕ್ ಅವರು ಇತ್ತೀಚೆಗೆ ಮನವರಿಕೆ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಆಸ್ಪತ್ರೆಯೊಂದರಲ್ಲಿ ಹೆಚ್ಚುವರಿ ಇದ್ದ ಈ ಯಂತ್ರವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ಒದಗಿಸಿದ್ದು,ಎರಡು ದಿನಗಳ ಹಿಂದೆ ಈ ಯಂತ್ರವನ್ನು ಆಸ್ಪತ್ರೆಯಲ್ಲಿ ಅಳವಡಿಸಲಾಗಿತ್ತು. ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು ಈ ಯಂತ್ರವನ್ನು ಪರಿಶೀಲಿಸಿ ವೈದ್ಯರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು,ವೈದ್ಯಾಧಿಕಾರಿ ಡಾ.ಪುಷ್ಪಲತಾ, ಪ್ರಮುಖರಾದ ರಮಾನಾಥ ರಾಯಿ,ಸುಕೇಶ್ ಚೌಟ,ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು.
