ಬಂಟ್ವಾಳ: ತಾಲೂಕಿನ ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸ್ ತುವೆ  ಮಂಜೂರಾತಿ ಮಾಡುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೆ ಸ್ಥಳೀಯ ತಾಪಂ ಸದಸ್ಯ ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.ಪಶ್ಚಿಮ ವಾಹಿನಿ ಯೋಜನೆ ಅಡಿಯಲ್ಲಿ ದ.ಕ.ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಿಗೆ ಅಲ್ಲಲ್ಲಿ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣವಾಗುತ್ತಿದೆ.IMG-20200727-WA0023
ಅದರಂತೆ ದ.ಕ.ಜಿಲ್ಲೆ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣ ಮಾಡಿದರೆ ಗ್ರಾಮದ ಹಲವಾರು ರೈತ ಕುಟುಂಬಗಳಿಗೆ ತನ್ನ ಕೃಷಿ ಚಟುವಟಿಕೆಗಳಿಗೆ ನೀರಾವರಿ ಸೌಲಭ್ಯಕ್ಕೆ ಅನುಕೂಲವಾಗುತ್ತದೆ.  ಮೇಲ್ಸ್ ತುವೆ ನಿರ್ಮಾಣದಿಂದಾಗಿ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದಿಂದ ಮಂಗಳೂರು ತಾಲೂಕಿನ ಇರುವೈಲು ಗ್ರಾಮಕ್ಕೆ ಸಂಪರ್ಕ ಸೇತುವೆ ನಿರ್ಮಾಣವಾದಲ್ಲಿ ಜನರಿಗೆ ತುಂಬಾ ಅನುಕೂಲವಾಗಿ ಮಂಗಳೂರು ಸಂಪರ್ಕಕ್ಕೆ ಸಹಕಾರಿಯಾಗುತ್ತದೆ.
ಎಂದು ಅವರು ಮನವಿಯಲ್ಲಿ ವಿವರಿಸಿದ್ದಾರೆ. ಹಾಗಾಗಿ ಬಂಟ್ವಾಳ ತಾಲೂಕು ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸೇತುವೆ ನಿರ್ಮಾಣವನ್ನು ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಿರ್ಮಿಸಿ ಕೊಡುವಂತೆ ಅಗತ್ಯ ಅನುದಾನ ಮಂಜೂರು ಮಾಡಬೇಕಾಗಿ ಅವರು ವಿನಂತಿ ಮಾಡಿದ್ದಾರೆ.

By Suddi9

Leave a Reply

Your email address will not be published. Required fields are marked *