ಬಂಟ್ವಾಳ: ರಾ.ಹೆ.75ರ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಲ್ಲಿ ಬೈಕ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೆಲ್ಕಾರ್ ನಿವಾಸಿ ತಾರನಾಥ್ (35) ಮೃತಪಟ್ಟವರಾಗಿದ್ದಾರೆ.

ಇವರು ಬುಧವಾರ ಸಂಜೆ ಬೈಕ್ ನಲ್ಲಿ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು.ಪರಿಣಾಮ ಗಂಭೀರಗಾಯಗೊಂಡಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿವೇಳೆ ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕೇಸುದಾಖಲಾಗಿದೆ.

By Suddi9

Leave a Reply

Your email address will not be published. Required fields are marked *