ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಪ್ರದಾನಿ ದಿವಂಗತ ಇಂದಿರಾ ಗಾಂದೀಜಿಯವರ ಪುಣ್ಯಸ್ಮರಣೆಯ ಪ್ರಯುಕ್ತ “ಮಾಜಿ ಗೇಣಿದಾರರ ಸಮಾವೇಶ” ಅ. ೩೧ ರಂದು ಶನಿವಾರ ಬೆಳಿಗ್ಗೆ ೧೧:೩೦ಕ್ಕೆ ಬಿ.ಸಿ ರೋಡಿನ ರಂಗೋಲಿ ಸಭಾಂಗಣದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈಯವರ ನೇತೃತ್ವದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಅವರು ಮುಖ್ಯ ಭಾಷಣಕಾರರಾಗಿ ಬಾಗವಹಿಸಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ “ಉಳುವವನೇ ಭೂಮಿಯ ಒಡೆಯ” ಕಾನೂನಿನ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂಸುದೀಪ್ ಕುಮಾರ್ ಶೆಟ್ಟಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
