ಬಂಟ್ವಾಳ: ಭಾರತೀಯ ಜನತಾ ಪಾರ್ಟಿಪ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ “ಆತ್ಮ ನಿರ್ಭರ ಭಾರತ’’ ವಿಶೇಷ ಕಾರ್ಯಗಾರರು ಬಿ.ಸಿ.ರೋಡ್ನ ಗೀತಾಂಜಲಿ ಸಭಾ ಭವನದಲ್ಲಿ ನಡೆಯಿತು. ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು.
ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ ಅವರು ಆತ್ಮ ನಿರ್ಭರ ಭಾರತದ ಕುರಿತಾಗಿ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪ್ರ.ಕಾರ್ಯದರ್ಶಿಗಳಾದ ಸುದೀರ್ ಕುಮಾರ್ ಶೆಟ್ಟಿ, ರಾಮದಾಸ್ ಬಂಟ್ವಾಳ ಉಪಸ್ಥಿತರಿದ್ದರು.

