ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ ತಿಂಗಳ ಸಭೆಯಲ್ಲಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಸಂಚಾಲಕರಾದ ಕೃಷ್ಣ ಕುಮಾರ್ ಪೂಂಜ ರವರನ್ನು ಕೋವಿಡ್ 19 ಸಂದರ್ಭದಲ್ಲಿ ಅವರು ಸಮಾಜಕ್ಕೆ ಮಾಡಿದ ಅದ್ಭುತ ಸೇವೆಯನ್ನು ಪರಿಗಣಿಸಿ ಸನ್ಮಾನಿಸಿ ಗೌರವಿಸಲಾಯಿತು.
ಕ್ಲಬ್ಬಿನ ಅಧ್ಯಕ್ಷ ಕೆ ನಾರಾಯಣ ಹೆಗ್ಡೆ ಯವರು ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ,ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಪ್ರಕಾಶ ಕಾರಂತರು ಅತಿಥಿಗಳಾಗಿ ಭಾಗವಹಿಸಿದ್ದರು. ಕ್ಲಬ್ಬಿನ ಕಾರ್ಯದರ್ಶಿ ವಾಣಿ ಕಾರಂತ,ಹಿರಿಯ ಸದಸ್ಯರಾದ ವಿಶ್ವನಾಥ ಶೆಟ್ಟಿ, ರಾಮಣ್ಣ ರೈ,ನವೀನ್ ಸಲ್ದಾನ ಮೊಹಮ್ಮದ್ ಇಕ್ಬಾಲ್ ಮತ್ತು ಪ್ರತಿಭಾ ರೈ ಅವರು ವೇದಿಕೆಯಲ್ಲಿ ಉಪಸ್ಥತರಿದ್ದರು