ಬಂಟ್ವಾಳ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ (97) ಮಂಗಳವಾರ ಬೆಳಿಗ್ಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಬಿ.ಸಿ.ರೋಡಿನವರಾದ ಇವರ ಕಳೆದ ಕೆಲವು ಸಮಯಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಶಿವಮೊಗ್ಗದ ಮಗನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.ತಮ್ಮ ಜೀವಿತದ ಬಹು ವರ್ಷಗಳನ್ನು ಶಿವಮೊಗ್ಗದಲ್ಲಿ ಕಳೆದಿದ್ದರೂ,ಇವರು ಮೂಲತಃ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನವರು.

ಕಲಿತದ್ದು ೭ನೇ ತರಗತಿವರೆಗೆ. ಆದರೆ ಕನ್ನಡ,ತಮಿಳು, ಹಿಂದಿ, ಇಂಗ್ಲಿಷ್, ತೆಲುಗು ಹೀಗೆ ಪಂಚಭಾಷೆ ಬಲ್ಲವರು.ವಿದ್ಯಾರ್ಥಿ ದೆಸೆಯಿಂದಲೇ ಬಾವುಟ ಹಿಡಿಯುವುದು, ಜೈಕಾರ ಕೂಗುವುದು, ಕರಪತ್ರಹಂಚುವುದು ಮೊದಲಾದ ಹುಡುಗಾಟಿಕೆಗಳಿಂದ ಕ್ರಾಂತಿಕಾರಿಯೆಂದು ಗುರುತಿಸಿಕೊಂಡಿದ್ದ ಇವರು ೧೯೪೨ರ ಬಳಿಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.
1923 ರಲ್ಲಿ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದಲ್ಲಿ ಜನಿಸಿದ ಶ್ಯಾಮರಾಯ ಆಚಾರ್ಯರು ಎಂ.ಡಿ.ಶ್ಯಾಮರಾವ್ ಎಂದೇ ಪ್ರಸಿದ್ಧರು. ಬಂಟ್ವಾಳ ಮಂಗಳೂರು ಮುಖ್ಯ ರಸ್ತೆಯ ಪಕ್ಕದಲ್ಲಿ ಇದ್ದ ಇವರ ಮನೆಯ ಮುಂದೆ ಹಾದು ಹೋಗುತ್ತಿದ್ದ ಸ್ವಾತಂತ್ರ್ಯ ಚಳುವಳಿಗಾರರ ಸಾಲುಸಾಲು ಹಾಗೂ ಪೊಲೀಸರ ಮಾರ್ಚ್ ಫಾಸ್ಟ್ ಸಣ್ಣ ವಯಸ್ಸಿನ ಶ್ರೀ ಶಾಮರಾಯರಿಗೆ ಪ್ರೇರಣೆಯಾದವು.ಅಂದಿನ ಕಾಂಗ್ರೇಸ್ ಸೇವಾದಳಕ್ಕೆ ಸೇರಿಕೊಂಡು ಗುಪ್ತವಾಗಿ ವಿವಿಧೆಡೆ ನಡೆಯುವ ಚಳುವಳಿಗಳ ಆಯೋಜನೆಗಳಲ್ಲಿ ಸಹಾಯ ಮಾಡುವುದು, ಸಂದೇಶಗಳನ್ನು ರವಾನಿಸುವುದು , ಹೀಗೆ ಯುವಕನಾಗಿ ತಮ್ಮನ್ನು ತೊಡಗಿಸಿಕೊಂಡರು. ಈ ಸಮಯದಲ್ಲಿ ಅನೇಕ ಮಹನೀಯರ ಒಡನಾಟ ಇವರಿಗೆ ದೊರಕಿತು.
ಎರಡು ತಿಂಗಳು ಜೈಲಿನಲ್ಲಿದ್ದರು.
1946 ರಲ್ಲಿ ಬಂಧಿತರಾಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಜೈಲು ಶಿಕ್ಷೆ ಗೆ ಒಳಗಾದರು.ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ ಕಾರ್ಯವನ್ನು ಮುಂದುವರೆಸಿಕೊಂಡ ಇವರು,ಗಾಂಧೀಜಿ ಯವರು ಹಾಕಿಕ್ಕೊಟ್ಟ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡರು. ಸ್ವಂತವಾಗಿ ಹಿಂದಿ ಕಲಿತು, ಹಿಂದಿಯನ್ನು ದೇಶದ ಸಂಪರ್ಕ ಭಾಷೆ ಮಾಡುವ ಗಾಂಧೀಜಿಯವರ ಕನಸಿನಂತೆ , ಶಿವಮೊಗ್ಗದ ಗಾಂಧಿ ಮಂದಿರದಲ್ಲಿ ಸಾವಿರಾರು ಜನರಿಗೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಮೂಲಕ ಯಾವುದೇ ಶುಲ್ಕವಿಲ್ಲದೇ ಹಿಂದಿ ಪಾಠ ಮಾಡಿದರು. ಇವರ ಶಿಷ್ಯರಲ್ಲಿ ಅನೇಕರು ಮುಂದೆ ಶಿವಮೊಗ್ಗದ ಹಿಂದಿ ಶಿಕ್ಷಕರಾಗಿ , ವಿದ್ವಾಂಸರಾಗಿ ಹೋಗಿರುವುದು ವಿಶೇಷ. ಈಗಿನ ಗಾಂಧಿ ಮಂದಿರಕ್ಕೆ ಇವರೇ ನಾಮಕರಣ ಮಾಡಿದ್ದು, ಮುಂದೆ ಅದುವೇ ಚಾಲನೆಯಲ್ಲಿ ಉಳಿದದ್ದು ವಿಶೇಷ,.

ನೂಲು ತೆಗೆಯುವುದರಲ್ಲಿ ಪರಿಣತಿಯ
ಅಂಬರ ಚರಕದಲ್ಲಿ ನೂಲು ತೆಗೆಯುವುದರಲ್ಲಿ ವಿಶೇಷ ಪರಿಣತಿಯನ್ನು ಹೊಂದಿದ ಇವರು,ಮನೆಮನೆಗೆ ತೆರಳಿ ಚರಕದಿಂದ ಇವರು ನೂಲು ತೆಗೆಯುವ ತರಬೇತಿ ನೀಡಿದ್ದಾರೆ. ಚಿನ್ನದ
ಕೆಲಸದಲ್ಲೂ ವಿಶೇಷ ಪ್ರಾವಿಣ್ಯತೆ ಹೊಂದಿದ್ದ ಇವರು ಹೋರಾಟದ ಆ ದಿನಗಳಲ್ಲಿ ರಾತ್ರಿಹೊತ್ತು ತನ್ನ ಅಣ್ಣ ಪುಟ್ಟಣ್ಣ ಆಚಾರ್ ರೊಂದಿಗೆ ಚಿನ್ನದ ಕೆಲಸ ಮಾಡಿಕೊಂಡಿದ್ದರು.
ಇವರ ದೇಶ ಪ್ರೇಮಿ ಬದುಕನ್ನು ಗೌರವಿಸಿ ಈಗಾಗಲೇ ನಾಡಿನ ಹಲವಾರು ಸಂಘಸಂಸ್ಥೆಗಳು ಶ್ಯಾಮ್ ರಾವ್ ರವರನ್ನು ಗೌರವಿಸಿದೆ. ಮೃತರು ಪತ್ನಿ ರಾಜೀವಿ, ಪುತ್ರ ಸತೀಶ್ ಹಾಗೂ ಐದುಮಂದಿ ಹೆಣ್ಣುಮಕ್ಕಳ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕಲ್ಲಡ್ಕದಲ್ಲಿ ಅಂತ್ಯಸಂಸ್ಕಾರ :
ಬೆಳಿಗ್ಗೆ ಶಿವಮೊಗ್ಗದಲ್ಲಿ ನಿಧನರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ರವರ ಪಾರ್ಥಿವ ಶರೀರವನ್ನು ಶಿವಮೊಗ್ಗ ತಾಲೂಕು ಆಡಳಿತದ ವತಿಯಿಂದ ಗೌರವ ವಂದನೆ ಸಲ್ಲಿಸಿದ ಬಳಿಕ ಸಂಜೆ ಕಲ್ಲಡ್ಕಕ್ಕೆ ತರಲಾಗಿದ್ದು, ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಅಂತಿಮ ಗೌರವ ಸಲ್ಲಿಸಲಾಯಿತು. ಪಾಣೆಮಂಗಳೂರು ಪ್ರಭಾರ ಉಪತಹಶೀಲ್ದಾರ್ ರಾಮ ಕಾಟಿಪಳ್ಳ, ಗ್ರಾಮ ಸಹಾಯಕ ಮೋಹನ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ ತಾಲೂಕು ಆಡಳಿತದ ಪರವಾಗಿ ಅಂತಿಮನಮನ ಸಲ್ಲಿಸಿದರು. ಗೋವಾ ಕನ್ನಡ ಸಂಘದ ಅಧ್ಯಕ್ಷ ಡಾ.ಕೃಷ್ಣ ಬಡಿಗೇರ, ಮಂಗಳೂರು ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಪುರುಷೋತ್ತಮ ಆಚಾರ್ಯ ಕೊಕ್ಕಡ , ಸೌತ್ ಕೆನರಾ ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕಿ ರೋಹಿಣಿ ರಾಘವ ಆಚಾರ್ಯ, ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ , ಕಾರ್ಯದರ್ಶಿ ಸಂದೀಪ್ ಆಚಾರ್ಯ, ಕಲ್ಲಡ್ಕ ಶಾರದಾ ಪೂಜಾ ಉತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಆಚಾರ್ಯ, ಶಾರದಾ ಪೂಜಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ನರಸಿಂಹ ಮಡಿವಾಳ, ಗೌರವಾಧ್ಯಕ್ಷ ಚಿ.ರಮೇಶ್ ಕಲ್ಲಡ್ಕ , ರತ್ನಾಕರ ಶೆಟ್ಟಿ ಕಲ್ಲಡ್ಕ, ಯತಿನ್ ಕಲ್ಲಡ್ಕ, ವಿಶ್ವನಾಥ ಕೊಟ್ಟಾರಿ, ಕೂಸಪ್ಪ ಸಫಲ್ಯ, ಮೊಕ್ತೇಸರ ಹರೀಶ್ ಆಚಾರ್ಯ ಹಾಗೂ ಸರ್ವಧರ್ಮದ ಅಭಿಮಾನಿಗಳು ಶ್ಯಾಮರಾವ್ ರವರ ಪಾರ್ಥಿವ ಶರೀರಕ್ಕೆ ಅಂತಿಮನಮನ ಸಲ್ಲಿಸಿದರು.
ಸಂತಾಪ: ಶ್ಯಾಮರಾವ್ ರವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಶಾಸಕ ಯು.ಟಿ.ಖಾದರ್, ಮಾಜಿಸಚಿವ ಬಿ.ರಮಾನಾಥ ರೈ ಮೊದಲಾದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಕೊನೆಗೂ ಈಡೇರದ ಚಾಕೂಟ: ಬಂಟ್ವಾಳದ ಹಿರಿಯ ಜೀವ ಎಂ.ಡಿ.ಶ್ಯಾಮರಾವ್ ರಾಷ್ಟ್ರಪತಿಗಳ ಚಹಾಕೂಟದಲ್ಲಿ ಕನಸು ಕೊನೆಗೂ ಈಡೇರಲಿಲ್ಲ, ಕ್ವಿಟ್ ಇಂಡಿಯಾ ಚಳುವಳಿಯ ಅಂಗವಾಗಿ ಪ್ರತೀ ವರ್ಷ ದೆಹಲಿಯಲ್ಲಿ ಏರ್ಪಾಡುಗೊಳ್ಳುತ್ತಿರುವ ರಾಷ್ಟ್ರಪತಿಗಳ ಚಹಾಕೂಟದಲ್ಲಿ ಪಾಲ್ಗೊಳ್ಳಬೇಕೆಂಬ ಆಸೆಯಿಂದ, ಕಳೆದ ನಾಲ್ಕೈದು ವರ್ಷಗಳಿಂದ ಎಂ.ಡಿ.ಶ್ಯಾಮರಾವ್ ಕಾಯುತ್ತಿದ್ದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತು 72 ವರ್ಷಗಳು ಕಳೆದಿವೆ. ಭಾರತದ ಸ್ವಾತಂತ್ರ್ಯಕ್ಕೆ ಹೋರಾಡಿದವರಲ್ಲಿ ಬಹುತೇಕರು ನಮ್ಮೊಂದಿಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಏಕೈಕ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಹೋರಾಡಿದವರಲ್ಲಿ ಒಬ್ಬರು.ಕೆಲವು ವರ್ಷಗಳ ಹಿಂದೆ ಇವರಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕರೆ ಬಂದಿತ್ತು. ರಾಷ್ಟ್ರಪತಿಗಳ ಚಹಾ ಕೂಟಕ್ಕೆ ತೆರಳುವಿರಾ, ಒಪ್ಪಿಗೆ ಪತ್ರ ಕಳುಹಿಸಿ ಎಂದು. ಅದರಂತೆ ಇವರು ಒಪ್ಪಿಗೆ ಸೂಚಿಸಿದರು. ಜೊತೆಯಾಗಿ ತೆರಳುವ ಸಹಾಯಕನ ವಿವರವನ್ನೂ ನೀಡಿದರು. ಆದರೆ ಆ ವರ್ಷ ಇವರ ಪತ್ರಕ್ಕೆ ಮರಳಿ ಪ್ರತಿಕ್ರಿಯೆ ಸಿಕ್ಕಲೇ ಇಲ್ಲ. ನಂತರದ ವರ್ಷ ಇವರನ್ನು ಅನಾರೋಗ್ಯ ಕಾಡಿತ್ತು, ಹಾಗಾಗಿ ದೆಹಲಿಗೆ ಬರಲಾರೆ ಎಂದಿದ್ದರು.
ಆ ಬಳಿಕದ ವರ್ಷದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸೂಚನೆಯಂತೆ ಬಂಟ್ವಾಳ ತಾಲ್ಲೂಕಿನ ಆಗಿನ ತಹಶೀಲ್ದಾರರು ಶ್ಯಾಮ್ ರಾವ್ ಅವರನ್ನು ಕರೆಸಿ ಅವರಿಂದ ಒಪ್ಪಿಗೆ ಪತ್ರ ಕೇಳಿದ್ದರು. ಶ್ಯಾಮ್ ರಾವ್ ಅವರು ದೆಹಲಿಗೆ ಹೊರಡುವ ಉತ್ಸಾಹದಲ್ಲೂ ಇದ್ದರು. ಆದರೆ ಆಗಸ್ಟ್ 9ರಂದು ನಡೆಯುವ ಚಹಾಕೂಟಕ್ಕೆ ನಿಮ್ಮ ಸ್ವಂತ ಖರ್ಚಿನಲ್ಲಿ ಬನ್ನಿ ಎಂಬ ಪತ್ರ ಆಗಸ್ಟ್ 7 ರಂದು ಇವರ ಕೈ ಸೇರಿತ್ತು. ಎರಡು ದಿನಗಳ ಅವಧಿಯಲ್ಲಿ ಪ್ರಯಾಣ ತ್ರಾಸವೆನಿಸಿ ಆ ವರ್ಷವೂ ರಾಷ್ಟ್ರಪತಿಗಳ ಚಹಾಕೂಟದ ಆಸೆಯನ್ನು ಕೈಬಿಡಬೇಕಾಯಿತು. ದೆಹಲಿಯಲ್ಲಿ ನಡೆಯುವ ರಾಷ್ಟ್ರಪತಿಗಳ ಚಹಾಕೂಟದಲ್ಲಿ ಭಾಗಿಯಾಗಬೇಕೆಂಬ ಎಂ.ಡಿ.ಶ್ಯಾಮರಾವ್ ಆಸೆ ಮಾತ್ರ ಕೊನೆಗೂ ಈಡೇರಲೇ ಇಲ್ಲ..