ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಏರೆಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಮುಂಭಾಗದ ತಡೆಗೋಡೆ ರಚನೆಗೆ ತಾಲೂಕು ಪಂಚಾಯತ್ ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ ಇವರ ಅನುದಾನದಿಂದ ಸುಮಾರು ರೂ 1.52 ಲಕ್ಷ ವೆಚ್ಚದ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ನೆರೆವೇರಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮುಕ್ತೇಸರಾದ ಕೇಶವ ಶಾಂತಿ, ಮೋನಪ್ಪ ಪೂಜಾರಿ, ರಾಜಾ ಬಂಟ್ವಾಳ, ಸಂಜೀವ ಸಪಲ್ಯ, ಸಂಜೀವ ಪೂಜಾರಿ, ಚಂದ್ರಶೇಖರ ಕೇದಿಗೆ.ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ. ಪಂ. ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ.ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಲ್ಬರ್ಟ್ ಮೆನೇಜಸ್, ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಧವ ಪೂಜಾರಿ, ಕರ್ಬೆಟ್ಟು, , ಗುತ್ತಿಗೆದಾರರಾದ ಗಣೇಶ್ ಬಿ. ಸಿ ರೋಡ್ ಸಹಿತ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
