ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ, ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರುರವರು‌ ಕಲ್ಲಚ್ಚು ವಿಂಶತಿ 2020 ಪ್ರಶಸ್ತಿಗೆ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು17 ಅಕ್ಟೋಬರ್ ರಂದು ವುಡ್ ಲ್ಯಾಂಡ್ಸ್ ಹೊಟೇಲ್ ಸಭಾಂಗಣದಲ್ಲಿ ನಡೆಯುವ ಕಲ್ಲಚ್ಚು ವಿಂಶತಿ ಸಮಾರಂಭದ ವೇಳೆ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ.

ಸಾಹಿತ್ಯ ಕ್ಷೇತ್ರದ ಅಮೋಘ ಸಾಧನೆಗಾಗಿ ನೀಡುವ ಅನೇಕ ಪ್ರಶಸ್ತಿಗಳನ್ನು ಈಗಾಗಲೇ
ಡಾ.ಮಾಲತಿ ಶೆಟ್ಟಿ ಮಾಣೂರು ಅವರು ಪಡೆದಿರುತ್ತಾರೆ. ಅವರು ಈವರೆಗೆ 9 ಕೃತಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ್ದಾರೆ.ಕಳೆದ 6 ವರ್ಷಗಳಿಂದ “ಅಮೃತ ಪ್ರಕಾಶ”‌ಎಂಬ ಸದಭಿರುಚಿಯ ಪತ್ರಿಕೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.ಪತ್ರಿಕೆ ವತಿಯಿಂದ ನಡೆಸುವ ಸರಣಿ ಕಾರ್ಯಕ್ರಮಗಳ ಮೂಲಕ ಈಗಾಗಲೇ ಇತರ ಸಾಹಿತಿಗಳ 25 ಕೃತಿಗಳನ್ನು ಬಿಡುಗಡೆಗೊಳಿಸಿದ್ದಾರೆ.ಭಾರತ ಜ್ಯೋತಿ, ರಾಷ್ಟ್ರೀಯ ವಿಭೂಷಣ ರಾಷ್ಟ್ರ ಪ್ರಶಸ್ತಿ ಯಂತಹ ಅನೇಕ ಪ್ರಶಸ್ತಿಗಳನ್ನು ಈಗಾಗಲೇ ಮುಡಿಗೇರಿಸಿಕೊಂಡಿದ್ದಾರೆ.

ವಿದ್ಯಾರ್ಥಿ ಗಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಲು ಪತ್ರಿಕೆ ಯ ಸಾರಥ್ಯದಲ್ಲಿ ಸ್ವತಃ ಹುಟ್ಟುಹಾಕಿದ ಅಮೃತ ಸಾಹಿತ್ಯ ವೇದಿಕೆಯ ಅಧ್ಯಕ್ಷರಾಗಿದ್ದಾರೆ.ರಾಜ್ಯ,ಹೊರ ರಾಜ್ಯಗಳಲ್ಲಿ ಹಾಗೂ ರಾಷ್ಟ್ರಮಟ್ಟದ ಲ್ಲಿ ಸರಕಾರೀ ಹಾಗೂ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ವಾಗಿ ಸಾಹಿತ್ಯ ಅಭಿರುಚಿ ಬೆಳೆಸಲು ವಿವಿಧ ಕಾರ್ಯಕ್ರಮಗಳನ್ನು ಈಗಾಗಲೇ ಹಮ್ಮಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *