ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕುರ್ನಾಡು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದ 7ನೇ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಆರೋಗ್ಯವಂತ ಶಿಶು ಸ್ಫರ್ಧೆ ಕಾರ್ಯಕ್ರಮವನ್ನು ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವದಾಸ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.
ಮಾಜಿ ಲಯನ್ಸ್ ಅಧ್ಯಕ್ಷ ಲೋಕನಾಥ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಮುಖರಾದ ಲಕ್ಷ್ಮಣ ಕುಲಾಲ್. ಪಿ.ಜೆ.ರೋಡ್ರಿಗ್ರಸ್, ಸುಜೀತ್, ವಸಂತಿ ಎಲ್. ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಸಿಂಧು ಮತ್ತು ಸವಿತಾ, ವೈದ್ಯಾಧಿಕಾರಿ ಡಾ.ಗೋಪಿ ಪ್ರಕಾಶ್, ಡಾ. ಮಿಥುನ್ ಮತ್ತಿತರರು ಇದ್ದರು.
ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ಕೆ.ಎಂ. ಇಕ್ಬಾಲ್ ವಂದಿಸಿದರು. ಶ್ರೀನಿವಾಸ್ ಮೆಲ್ಕಾರ್ ಕಾರ್ಯಕ್ರಮ ನಿರೂಪಿಸಿದರು.
