ಬಂಟ್ವಾಳ:ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕ್ಷೇತ್ರದಾದ್ಯಂತ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಗೋಳ್ತಮಜಲುವಿನ ಕಾಂಗ್ರೆಸ್ ನಾಯಕ, ಮಾಜಿ ಗ್ರಾಂ.ಪಂ ಸದಸ್ಯ ಎಲಿಯಾಸ್ ಡಿ.ಸೋಜರವರು ತನ್ನ  ಬೆಂಬಲಿಗರೊಂದಿಗೆ  ರವಿವಾರ ಸಂಜೆ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.IMG-20201122-WA0089

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ,ಶಾಸಕ ರಾಜೇಶ್ ನಾಯಕ್ ಹಾಗೂ ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರು ಎಲಿಯಾಸ್ ಡಿಸೋಜ ಮತ್ತವರ ಬೆಂಬಲಿಗರನ್ನು ಪಕ್ಷದ ಶಾಲು ಹಾಕಿ,ಧ್ವಜ ನೀಡಿ ಸ್ವಾಗತಿಸಿದರು.           IMG-20201122-WA0078

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ,ರಾಜ್ಯ ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ,ಜಿಪಂ ಸದಸ್ಯರಾದ ಕಮಾಲಾಕ್ಷಿ ಪೂಜಾರಿ,ರವೀಂದ್ರಕಂಬಳಿ, ಮಾಣಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರೋನಾಲ್ಡ್ ಡಿಸೋಜ ಅಮ್ಟಾಡಿ,ಬಂಟ್ವಾಳ ಭೂ ಬ್ಯಾಂಕ್ ನಿರ್ದೇಶಕ,ನ್ಯಾಯವಾದಿ ಅರುಣ್ ರೋಶನ್ ಡಿಸೋಜ,  ಕ್ರೈಸ್ತ ಅಭಿವೃದ್ದಿ ಮಂಡಳಿ ಅಧ್ಯಕ್ಷ ಜಾಯ್ ಲೆಸ್ ,  ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ವಾಳ,ಬಂಟ್ವಾಳ ಕ್ಷೇತ್ರ ಸಮಿತಿಯ ಪ್ರ.ಕಾರ್ಯದರ್ಶಿಗಳಾದ ಡೊಂಬಯ ಅರಳ,ರವೀಶ್ ಶೆಟ್ಟಿ, ಯುವ ಮೋರ್ಚಾದ ಪ್ರ.ಕಾರ್ಯದರ್ಶಿ ಸುದರ್ಶನ್ ಬಜ,ಗೋಳ್ತಮಜಲು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಮಾನಾಥ ರಾಯಿ,ಹಿಂದುಳಿದ ವರ್ಗ ಮೋರ್ಛಾದ ಪ್ರ.ಕಾರ್ಯದರ್ಶಿ ಮೋನಪ್ಪ ದೇವಸ್ಯ,ಜಿಲ್ಲಾ ಮಾಧ್ಯಮ ಪ್ರಮುಖ ಸಂದೇಶ್ ಶೆಟ್ಟಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷ  ವಜ್ರನಾಭ ಕಲ್ಲಡ್ಕ ಹಾಗೂ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.   ಗೋಳ್ತಮಜಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳ್ತಮಜಲು ಮತ್ತು ಅಮ್ಟೂರು ಗ್ರಾಮಗಳನ್ನೊಳಗೊಂಡಂತೆ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಅವರ ನಿವಾಸದಲ್ಲಿ  ನಡೆಯಿತು.

By suddi9

Leave a Reply

Your email address will not be published. Required fields are marked *